ಉದಯವಾಹಿನಿ, ಕಲಬುರಗಿ : ಜಿಲ್ಲೆಯಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆಯ 5 ಹೊಸ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗಿದ್ದು,ಪ್ರಗತಿಯಲ್ಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ,ಮಾಹಿತಿ ತಂತ್ರಜ್ಞಾನ ,ಜೈವಿಕ ತಂತ್ರಜ್ಞಾನ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ ಬಿ.ಜಿ ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು 7 ಕಾಮಗಾರಿಗಳ ಪ್ರಸ್ತಾವನೆಯು ಪರಿಶೀಲನೆ ಹಂತದಲ್ಲಿದೆ. ಕಲಬುರಗಿ ಜಿಲ್ಲೆಯಲ್ಲಿ 36 ಮತ್ತು ಯಾದಗಿರಿ ಜಿಲ್ಲೆಯಲ್ಲಿ 7 ಬಹುಗ್ರಾಮ ಕುಡಿಯುವ ನೀರು ಯೋಜನೆಗಳಿವೆ ಎಂದು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

error: Content is protected !!