ಉದಯವಾಹಿನಿ, ಕೆಂಗೇರಿ : ಯಶವಂತಪುರ ವಿಧಾನಸಭಾ ಕ್ಷೇತ್ರದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೆಂಗೇರಿ ವಾರ್ಡ್ ನ ಕೊಮ್ಮಘಟ್ಟ ಮುಖ್ಯರಸ್ತೆಯ ಶ್ರೀ ಕ್ಷೇತ್ರ ಏಕದಳ ಬಿಲ್ವ ಬಂಡೆ ಮಠ ಆವರಣದಲ್ಲಿ ಕಾರ್ತಿಕ ಮಾಸದ ಕಡೆ ಸೋಮವಾರದಂದು ಅತ್ಯಂತ ವಿಜೃಂಭಣೆಯಿಂದ ಲಕ್ಷ ದೀಪೋತ್ಸವ ಹಾಗೂ ತೆಪ್ಪೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಸಾವಿರಾರು ಸಂಖ್ಯೆಯ ಭಕ್ತಾದಿಗಳು ಲಕ್ಷ ದೀಪೋತ್ಸವ ಹಾಗೂ ತೆಪ್ಪೋತ್ಸವ ಕಾರ್ಯಕ್ರಮದಲ್ಲಿ ಶ್ರದ್ಧೆ ಭಕ್ತಿ ಭಾವದಿಂದ ಪಾಲ್ಗೊಂಡು ದೀಪ ಹಚ್ಚುವ ಮೂಲಕ ಭಕ್ತಿ ಭಾವದಿಂದ ಮಿಂದೆದ್ದರು.
ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮುನ್ನ ಶ್ರೀ ಕ್ಷೇತ್ರ ಏಕದಳ ಬಿಲ್ವ ಬಂಡೆಮಠ ಪೀಠಾಧಿಪತಿಗಳಾದ ಶ್ರೀ ಸಚ್ಚಿದಾನಂದ ಮಹಾ ಸ್ವಾಮೀಜಿಯವರು ಪೂಜೆ ನೆರವೇರಿಸಿ ನಂತರ ದೀಪೋತ್ಸವಕ್ಕೆ ಚಾಲನೆ ನೀಡಿದರು. ಸಾವಿರಾರು ಸಂಖ್ಯೆಯಲ್ಲಿದ್ದ ಭಕ್ತಾದಿಗಳು ಏಕಕಾಲದಲ್ಲಿ ದೀಪ ಬೆಳಗಿಸುವ ಮೂಲಕ ಲಕ್ಷ ದೀಪೋತ್ಸವದ ಸಂಭ್ರಮವನ್ನು ಹೆಚ್ಚಿಸಿದರು. ಇದೆ ವೇಳೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯ ಎಂ. ಡಿ. ಲಕ್ಷ್ಮೀನಾರಾಯಣ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಮರಿಸ್ವಾಮಿ, ಬಿಜೆಪಿ ಮುಖಂಡರಾದ ಶಶಿ ಕುಮಾರ್ , ಮೋಹನ್ ಕುಮಾರ್ , ಕೃಷ್ಣ ಸಾಗರ ಜಗದೀಶ್, ಉತ್ತರ ಕರ್ನಾಟಕ ಗೆಳೆಯರ ಚಾರಿಟೇಬಲ್ ಟ್ರಸ್ಟ್ (ರಿ ) ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡಿದ್ದರು.
