ಉದಯವಾಹಿನಿ, ಬೆಳಗಾವಿ:  ಬೆಳಗಾವಿಯ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮ, ಹುಬ್ಬಳ್ಳಿ-ಧಾರವಾಡ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಹೆಸರನ್ನು ನಾಮಕರಣ ಮಾಡಲು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್.ಕೆ.ಪಾಟೀಲ್ ಅವರು ವಿಧಾನಸಭೆಯಲ್ಲಿ ತಿಳಿಸಿದರು.
‘ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಇತಿಹಾಸ ಪುರುಷರ ಹೆಸರನ್ನು ಇರಿಸುವ ವಿಚಾರದಲ್ಲಿ ಸರಕಾರ ಸಕಾರಾತ್ಮಕವಾಗಿದೆ.

ಸದಸ್ಯರ ಒತ್ತಾಯದಂತೆ ಎಲ್ಲರೂ ಒಪ್ಪಿ ಸದನ ಸರ್ವಾನುಮತದ ನಿರ್ಣಯ ಕೈಗೊಂಡರೂ ಸ್ವಾಗತಿಸುತ್ತದೆ ಎಂದು ಸ್ಪಷ್ಟಪಡಿಸಿದರು. ಶೂನ್ಯ ವೇಳೆಯಲ್ಲಿ ಆಡಳಿತ ಪಕ್ಷದ ಸದಸ್ಯ ಕೋನರೆಡ್ಡಿ ವಿಷಯ ಪ್ರಸ್ತಾಪಿಸಿದ ಕೋನರೆಡ್ಡಿ, ಹುಬ್ಬಳ್ಳಿ-ಧಾರವಾಡ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಮತ್ತು ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಹೆಸರನ್ನು ಇರಿಸಬೇಕು ಎಂದು ಒತ್ತಾಯಿಸಿದರು. ಬಿಜೆಪಿ ಸದಸ್ಯ ಅರವಿಂದ ಬೆಲ್ಲದ್ ಧ್ವನಿಗೂಡಿಸಿದರು. ಸದಸ್ಯರ ಕಳಕಳಿ ಸರ್ಕಾರ ಗಂಭೀರವಾಗಿ ನಾಮಕರಣ ಮಾಡುವ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಪರಿಶೀಲನೆ ನಡೆಸಿ ಕ್ರಮಕೈಗೊಳ್ಳಲಾಗುವುದು.

Leave a Reply

Your email address will not be published. Required fields are marked *

error: Content is protected !!