ಉದಯವಾಹಿನಿ, ಮಳವಳ್ಳಿ: ತಾಲ್ಲೂಕಿನ ದೇಶಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಪತಿಯೇ ಪತ್ನಿಯನ್ನು ಕಬ್ಬಿಣದ ರಾಡಿನಿಂದ ಹೊಡೆದು ಕೊಲೆ ಮಾಡಿದ್ದಾನೆ.ಗ್ರಾಮದ ಮಧುಶ್ರೀ(32) ಕೊಲೆಯಾದ ಮಹಿಳೆ. ಪತಿ ಮಹದೇವ್(38) ಆರೋಪಿ. ಹತ್ತು ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿಗೆ 8 ವರ್ಷದ ಹಾಗೂ 6 ವರ್ಷದ ಇಬ್ಬರು ಪುತ್ರಿಯರು ಇದ್ದಾರೆ. ಆರೋಪಿ ಬನ್ನೂರಿನಲ್ಲಿ ಖಾಸಗಿ ವಾಹನದ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ದಂಪತಿ ನಡುವೆ ಜಗಳ ನಡೆದಿದ್ದು, ಈ ವೇಳೆ ಮನೆಯಲ್ಲಿದ್ದ ಕಬ್ಬಿಣದ ರಾಡಿನಿಂದ ಮಹದೇವ್ ಮಧುಶ್ರೀ ತಲೆಗೆ ಹೊಡೆದಿದ್ದು, ಘಟನೆಯಲ್ಲಿ ಪತ್ನಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕೊಲೆ ಮಾಡಿದ ನಂತರ ಆರೋಪಿ ಕಿರುಗಾವಲು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
