ಉದಯವಾಹಿನಿ, ಕಲಬುರಗಿ : ವಿಷ ಸೇವಿಸಿ ಅಪ್ರಾಪ್ತ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ತಾಪುರ ತಾಲೂಕಿನ ಕೊಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ನಡೆದಿದೆ.
ತರ್ಕಸ್ ಪೇಟೆ ಗ್ರಾಮದ ರಾಧಿಕಾ ಮೆತ್ತನ್ (14) ಹಾಗೂ ಕೊಲ್ಲೂರ ಗ್ರಾಮ ನಿವಾಸಿ ಆಕಾಶ ಭೋವಿ (19) ಎಂಬುವವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡ ಇಬ್ಬರನ್ನು ಕೂಡಲೇ ಕಲಬುರಗಿ ಆಸ್ಪತ್ರೆಗೆ ದಾಖಲಿಸಿದರೂ ಕೂಡ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
