ಉದಯವಾಹಿನಿ, ಬೆಳಗಾವಿ: ಮಂಡ್ಯದ ಕೆಆರ್‌ಎಸ್ ಜಲಾಶಯದಲ್ಲಿ ಹೂಳು ತುಂಬಿರುವ ಬಗ್ಗೆ ಪರಿಶೀಲನೆ ನqಸಲು ತಜ್ಞರ ತಂಡವನ್ನು ಕಳುಹಿಸಿ ಅಧ್ಯಯನ ನಡೆಸಲು ಉಪಮುಖ್ಯಮಂತ್ರಿ ಹಾಗೂ ಜಲಷಂಪನ್ಮೂ ಸಚಿವ ಡಿ.ಕೆ ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಳಗಾವಿಯ ವಿಧಾನ ಮಂಡಲದ ಅಧಿವೇಶನ ಸಂದರ್ಭದಲ್ಲಿ ಶಾಸಕರುಗಳಾದ ರಮೇಶ್ ಬಂಡಿಸಿದ್ದೇಗೌಡ ಹಾಗೂ ದಿನೇಶ್ ಗೂಳಿಗೌಡ ಅವರು ಸಲ್ಲಿಸಿದ ಮನವಿಗೆ ಸ್ಪಂದಿಸಿದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ನೀರಾವರಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳಿಗೆ ಈ ಕುರಿತು ಸೂಚನೆ ನೀಡಿ ತಜ್ಞರ ತಂಡ ಕಳುಹಿಸಿ ಕೆಆರ್‌ಎಸ್ ಜಲಾಶಯದಲ್ಲಿ ಹೂಳು ತುಂಬಿದೆಯೇ, ಮಾಡ್ರನ್ ಸ್ಟಾಂಡರ್ಡ್‌ಗಳಿಗೆ ಅಣೆಕಟ್ಟು ಹೊಂದಿಕೆಯಾಗುವಂತಿದೆಯೇ ಎಂಬುದನ್ನು ಅಧ್ಯಯನ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದರು.
ಅಣೆಕಟ್ಟಿನ ಗರಿಷ್ಠ ಸಾಮರ್ಥ್ಯದ ೪೯.೫೦ ಟಿಎಂಸಿ ನೀರು ಈಗಲೂ ಸಂಗ್ರಹವಾಗುತ್ತಿದೆಯೇ ನೀರು ಸೋರಿಕೆಯ ನಿರ್ವಹಣೆ, ಜಲಾಶಯದ ಗೇಟ್‌ಗಳ ಸುಸ್ಥಿತಿ ಸೇರಿ ಇನ್ನಿತರ ಅಂಶಗಳನ್ನು ಪರಿಶೀಲಿಸಬೇಕು ಎಂಬುದಾಗಿ ಶಾಸಕರಾದ ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ದಿನೇಶ್ ಗೂಳಿಗೌಡ ಅವರು ಮನವಿಯಲ್ಲಿ ಪ್ರಸ್ತಾಪಿಸಿದ್ದರು. ಇದಕ್ಕೆ ಸ್ಪಂದಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಈ ಆದೇಶವನ್ನು ನೀಡಿದ್ದಾರೆ.
ಮನವಿಯಲ್ಲಿರುವ ಅಂಶಗಳು ಅಣೆಕಟ್ಟೆ ನಿರ್ಮಾಣ ಮಾಡುವ ಕಾಲದಲ್ಲಿ “ಹೈ ಡ್ಯಾಂ ತಂತ್ರಜ್ಞಾನ” ಇರಲಿಲ್ಲ. ಇದರಿಂದ ದೊಡ್ಡ ಗಟ್ಟಿ ಇಡಿ ಕಲ್ಲುಗಳಿಂದ ನಿರ್ಮಾಣವಾಗಿದೆ.

Leave a Reply

Your email address will not be published. Required fields are marked *

error: Content is protected !!