
ಉದಯವಾಹಿನಿ, ವಿಜಯಪುರ: ಟ್ರ್ಯಾಕ್ಟರ್ ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್‍ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಜಿಲ್ಲೆ ಬಬಲೇಶ್ವರ ತಾಲೂಕಿನ ಎಚ್ ಎಚ್ ಸಂಗಾಪೂರ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಬಾಗಲಕೋಟೆ ಜಿಲ್ಲೆ ಮಹಾಲಿಂಗಪೂರದ ರಾಹುಲ್ ಬೆನ್ನೂರ (18), ಸಮೀರ್ ಬಿಸ್ತಿ (18) ಎಂದು ಗುರುತಿಸಲಾಗಿದೆ.
ಈ ಇಬ್ಬರು ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಸ್ಥಳಕ್ಕೆ ಬಬಲೇಶ್ವರ ಪೆÇಲೀಸ್ ಠಾಣೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಬಬಲೇಶ್ವರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
