ಉದಯವಾಹಿನಿ, ಕೆ.ಆರ್.ಪುರ: ಬೆಂಗಳೂರು ನಗರಕ್ಕೆ ಹಲವು ವಿದೇಶಿ ಕಂಪನಿಗಳು ಹೂಡಿಕೆ ಹಾಗೂ ಸಂಸ್ಥೆಗಳನ್ನು ತೆರೆಯಲು ಉತ್ಸುಕರಾಗಿದ್ದು,ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಲು ಐಟಿಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಅವರು ಸಲಹೆ ನೀಡಿದರು. ಕೆ.ಆರ್.ಪುರ ಕ್ಷೇತ್ರದ ಕೆಂಬ್ರಿಡ್ಜ್ ಕಾಲೇಜಿನಲ್ಲಿ ಏರ್ಪಡಿಸಿದ್ದ ಸೆಮಿನಾರ್ ಹಾಗೂ ಲ್ಯಾಬ್ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ತಮ್ಮ ಕೌಶಲಗಳನ್ನು ಅಭಿವೃದ್ಧಿ ಪಡಿಸಿಕೊಳ್ಳುವ ಕಾರ್ಯ ಮಾಡಬೇಕು ಆಮೂಲಕ ನೂತನ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಯಶಸ್ವಿಯಾಗುವಂತೆ ಸಲಹೆ ನೀಡಿದರು.
ಕಾಂಗ್ರೆಸ್ ಸರ್ಕಾರದ ವತಿಯಿಂದ ರಾಜ್ಯದಲ್ಲಿ ಹೂಡಿಕೆ ಮಾಡುವ ಸಂಸ್ಥೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದು, ರಾಜ್ಯದ ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗ ಅವಕಾಶಗಳು ದೊರೆಯಲಿದೆ ಎಂದು ನುಡಿದರು. ದೇಶದ ಅಭಿವೃದ್ಧಿ ಯುವಕರ ಜವಾಬ್ದಾರಿಯಾಗಿದ್ದು,ಯುವಕರು ಈ ನಿಟ್ಟಿನಲ್ಲಿ ಸಂಶೋಧನೆಗಳಲ್ಲಿ ತೊಡಗಿಕೊಳ್ಳುವಂತೆ ಸಲಹೆ ನೀಡಿದರು.
ಕೇಂಬ್ರಿಡ್ಜ್ ವಿದ್ಯಾಸಂಸ್ಥೆ ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದು,ಈ ಸಂಸ್ಥೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಹೆಚ್ಚು ಆದ್ಯತೆ ನೀಡುತ್ತಿರುವುದು ಸಂತಸ ತಂದಿದೆ ಎಂದು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಕೇಂಬ್ರಿಡ್ಜ್ ಕಾಲೇಜಿನ ಅಧ್ಯಕ್ಷ ಡಿ.ಕೆ.ಮೋಹನ್, ಡಾ.ಶಿವಾನಂದ ಕೋಟೆಶ್ವರ,ನಿರ್ದೇಶಕಿ ತನುಜಾ ಸತೀಶ್, ಸಂಸ್ಥೆಯ ಸಿಇಓ ನೀತಿಶ್ ಮೋಹನ್ ,ಪ್ರಾಂಶುಪಾಲ ಇಂದುಮತಿ ಇದ್ದರು.
