ಉದಯವಾಹಿನಿ , ಕೋಲಾರ: ತಾಲ್ಲೂಕಿನ ವಕ್ಕಲೇರಿ ಹೋಬಳಿಯ ವೆಂಕಟಾಪುರ ಗ್ರಾಮದ ಎಂಟು ನೂರು ವರ್ಷದ ಪುರಾಣಪ್ರಸಿದ್ದ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಅಂಗವಾಗಿ ಡಿ.೨೩ರ ಶನಿವಾರ ವಿಶೇಷ ಪೂಜೆ ಹಾಗೂ ವೈಕುಂಠದ್ವಾರ ಪ್ರವೇಶ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ವೈಕುಂಠ ಏಕಾದಶಿ ಅಂಗವಾಗಿ ಅಂದು ಮುಂಜಾನೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಲಿದ್ದು, ಇಡೀ ದೇವಾಲಯ ವಿಶೇಷ ಹೂಗಳಿಂದ ಅಲಂಕರಿಸಲಾಗುವುದು ಭಕ್ತರಿಗೆ ಇಡೀ ದಿನ ಪ್ರಸಾದ ವಿನಿಯೋಗದ ವ್ಯವಸ್ಥೆ ಮಾಡಲಾಗಿದೆ.
