ಉದಯವಾಹಿನಿ, ಬೆಂಗಳೂರು: ನೆರೆಯ ಕೇರಳ ರಾಜ್ಯದಿಂದ ಕೋವಿಡ್ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕ್ರಿಸ್ ಮಸ್, ಹೊಸ ವರ್ಷದ ಸಂಭ್ರಮಾಚರಣೆಗ ಕಟ್ಟುನಿಟ್ಟಿನ ಕ್ರಮ ಶಿಫಾರಸು ಮಾಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಮಂಗಳವಾರ ತಾಂತ್ರಿಕ ಸಲಹಾ ಸಮಿತಿ ಸಭೆ ಕರೆದಿದ್ದು, ಸರ್ಕಾರಕ್ಕೆ ಯಾವ ಯಾವ ನಿಯಂತ್ರಣ ಕ್ರಮ ಕೈಗೊಳ್ಳಲು ಸಲಹೆ ನೀಡಲಿದ್ದಾರೆಂಬ ಕುರಿತು ಕುತೂಹಲ ಮೂಡಿದೆ.
ಸಭೆ ಬಳಿಕ ರಾಜ್ಯ ಸರ್ಕಾರ ಕ್ರಿಸ್ಮಸ್, ಹೊಸ ವರ್ಷದ ಸಂಭ್ರಮಾಚರಣೆಗ ಕಟ್ಟುನಿಟ್ಟಿನ ಕ್ರಮ ಶಿಫಾರಸು ಮಾಡುವ ಸಾಧ್ಯತೆಗಳಿವೆ.
ಹೊಸ ಉಪತಳಿ ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಈಗಾಗಲೇ ತುರ್ತು ಸಭೆ ನಡೆಸಿ, ಪ್ರಾಥಮಿಕ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಿದ್ದರು. ಇದರ ಬೆನ್ನಲ್ಲೇ ಮಂಗಳವಾರ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯು ಸಭೆ ಕರೆಯಲಾಗಿದೆ.
ಇನ್ನೂ, ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ೧,೩೦೦ ಗಡಿ ದಾಟಿದೆ. ಒಂದು ಕಡೆ ಕೇರಳದಲ್ಲೂ ಪ್ರತಿನಿತ್ಯ ೩೦೦ಕ್ಕೂ ಹೆಚ್ಚು ಕೇಸ್‌ಗಳು ದಾಖಲಾಗುತ್ತಿದೆ. ಹೀಗಾಗಿ ಪ್ರಾಥಮಿಕ ಹಂತದಲ್ಲಿಯೇ ಕೊರೊನಾ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.
