ಉದಯವಾಹಿನಿ, ಬೆಂಗಳೂರು : ‘ಕೊರೊನಾ ಮಾರ್ಗಸೂಚಿ’ ಯನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ಭೀತಿ ಹಿನ್ನೆಲೆ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ.ಇದೀಗ ಸಿಎಂ ಸಿದ್ದರಾಮಯ್ಯ ಕೊರೊನಾ ಮಾರ್ಗಸೂಚಿ’ ಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.
ಜಗತ್ತಿನಾದ್ಯಂತ ಕೊರೊನಾ ಮತ್ತೆ ಉಲ್ಬಣಿಸುತ್ತಿದೆ. ರಾಜ್ಯದಲ್ಲಿ ಕೊವಿಡ್ -19 ವೈರಸ್ ಹರಡದಂತೆ ತಡೆಗಟ್ಟಲು ನಮ್ಮ ಸರ್ಕಾರವು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದೆ. ನಮ್ಮ ಪ್ರಯತ್ನ ಫಲನೀಡಬೇಕಾದರೆ ಸಾರ್ವಜನಿಕರ ಸಹಕಾರವೂ ಅತಿ ಮುಖ್ಯ. ಜನರ ಆರೋಗ್ಯದ ದೃಷ್ಟಿಯಿಂದ ನಾವು ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದೇವೆ. ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ. ನಾವು ನೀವು ಜೊತೆಗೂಡಿ ಕೊರೊನಾ ಸಾಂಕ್ರಾಮಿಕವನ್ನು ಹಿಮ್ಮೆಟ್ಟಿಸೋಣ” ಎಂದಿದ್ದಾರೆ.
