ಉದಯವಾಹಿನಿ, ಕಲಬುರಗಿ: ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಅತ್ಯಾಚಾರ ಎಸಗಿರುವ ಭಯಾನಕ ಘಟನೆ ಜಿಲ್ಲೆಯಲ್ಲಿ ವರದಿಯಾಗಿದೆ. ಜಿಲ್ಲೆಯ ಕಾಳಗಿ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದೆ. ಹತ್ತು ವರ್ಷದ ಬಾಲಕಿಗೆ ಚಾಕು ತೋರಿಸಿ 14 , 16 ವರ್ಷ ವಯಸ್ಸಿನ ಇಬ್ಬರು ಅಪ್ರಾಪ್ತರೇ ಅತ್ಯಾಚಾರ ಎಸಗಿದ್ದಾರೆ. ಮಾತ್ರವಲ್ಲದೇ ಪರಸ್ಪರರು ಮೊಬೈಲ್‍ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ. ಸಂತ್ರಸ್ತ ಬಾಲಕಿಯ ಹೆತ್ತವರು ಮುಂಬಯಿನಲ್ಲಿದ್ದು, ಆಕೆಯ ಸಂಬಂಧಿಕರ ಮನೆಯಲ್ಲಿದ್ದುಕೊಂಡು ಶಿಕ್ಷಣ ಪಡೆಯುತ್ತಿದ್ದಳು. ಕಾಳಗಿ ಪೋಲಿಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
