ಉದಯವಾಹಿನಿ,ಕೋಲಾರ : ವಾಹನ ಸವಾರರು ಟ್ರಾಫಿಕ್ ನಿಯಮ ಉಲ್ಲಂಘಿಸುವ ಪ್ರಕರಣಗಳಲ್ಲಿ ಸಂಚಾರ ಪೊಲೀಸರು ಯಾವೂದೇ ಸಂದರ್ಭದಲ್ಲಿ ಅರೋಪಿಯಿಂದ ದಂಡದ ಮೊತ್ತ ಸಂಗ್ರಹಿಸಲು ಅವಕಾಶವಿಲ್ಲ ಎಂದು ಹೈ ಕೋರ್ಟ್ ತಿಳಿಸಿದೆ.
ಹೆಲ್ಮೆಟ್ ಧರಿಸದೆ ಇರುವುದಕ್ಕ ದಂಡ ಪಾವತಿಸಲು ನಿರಾಕರಿಸಿದ ಮತ್ತು ಬಲ ಪ್ರಯೋಗ ನಡೆಸಿ ಸರ್ಕಾರಿ ಅಧಿಕಾರಿಯ ಕರ್ತವ್ಯ ನಿರ್ವಾಹಣೆಗೆ ಅಡ್ಡಿ ಪಡೆಸಿದ್ದ ಆರೋಪ ಸಂಬಂಧ ತಮ್ಮ ವಿರುದ್ದ ದೋಷಾರೋಪ ಪಟ್ಟಿ ರದ್ದು ಮಾಡುವಂತೆ ಕೋರಿ ಕೆ.ಆರ್. ಪೇಟೆಯ ಪಟ್ಟಣ ಸುಭಾಷ್ ನಗರದ ನಿವಾಸಿ ಕೆ.ಟಿ.ನಟರಾಜ್ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರ ಪೀಠ ಈ ಆದೇಶವನ್ನು ನೀಡಿದೆ.
ಕಳೆದ ೨೦೧೯ರ ಪ್ರಕರಣವೊಂದರ ತೀರ್ಪನ್ನು ಉಲ್ಲೇಖಿಸಿರುವ ನ್ಯಾಯ ಪೀಠ ಸಂಚಾರ ನಿಯಮ ಉಲ್ಲಂಘಿಸಿರುವ ಪ್ರಕರಣದಲ್ಲಿ ಪೊಲೀಸರು ತಪಾಸಣೆ ಮಾಡುವುದನ್ನು ವಿಡಿಯೋ ಚಿತ್ರಕರಣ ಮಾಡಬೇಕಾಗುತ್ತದೆ. ಹಾಗ ಸಂಚಾರ ಪೊಲೀಸರು ವಾಹನ ಸವಾರರಿಂದ ದಂಡದ ಮೊತ್ತ ಸಂಗ್ರಹಿಸಲು ಅವಕಾಶವಿಲ್ಲ ಎಂದು ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ ತಿಳಿಸಿದೆ.
ವಾಹನ ತಪಾಸಣೆ ಚಟುವಟಿಕೆಯನ್ನು ವಿಡಿಯೋ ಚಿತ್ರೀಕರಣ ಮಾಡ ಬೇಕು. ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆಗೆ ಮುಂದಾದರೆ ವ್ಯಕ್ತಿಯನ್ನು ತಡೆಯ ಬೇಕು, ಘಟನಾ ಸ್ಥಳಕ್ಕೆ ಸಂಬಂಧ ಪಟ್ಟ ಠಾಣೆಯ ಪೊಲೀಸರನ್ನು ಕರೆಸಿ ಅರೋಪಿಯನ್ನು ವಶಕ್ಕೆ ನೀಡಬೇಕು. ಇಲ್ಲದಿದ್ದರೆ ಹಲ್ಲೆ ಹಾಗೂ ಬಲ ಪ್ರಯೋಗ ನಡೆಸಿ ಸರ್ಕಾರಿ ಅಧಿಕಾರಿಯ ಕರ್ತವ್ಯ ನಿರ್ವಹಣೆಗೆ ಅಡ್ಡಿ ಪಡೆಸಿದ ಪ್ರಕರಣವನ್ನು ಸಾಭೀತು ಪಡೆಸಲು ಸಾಧ್ಯವಿಲ್ಲ ಎಂದು ಸ್ವಷ್ಟಪಡಿಸಿದೆ.

Leave a Reply

Your email address will not be published. Required fields are marked *

error: Content is protected !!