ಉದಯವಾಹಿನಿ, ಕೋಲಾರ: ಕೇಂದ್ರ ಆರೋಗ್ಯ ಇಲಾಖೆಯಿಂದ ಬಿಡುಗಡೆಯಾಗಿರುವ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರು ಪಾಲಿಸ ಬೇಕು.ಅದೇ ರೀತಿ ರಾಜ್ಯ ಸರ್ಕಾರವು ಮುಂಜಾಗೃತ ಕ್ರಮಗಳನ್ನು ಬಿಡುಗಡೆ ಮಾಡಲಿದ್ದು ಕ್ರಮವಹಿಸಲಾಗಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು,
ಕೇರಳ ಸೇರಿದಂತೆ ವಿವಿಧ ಭಾಗಗಳಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನಲೆಯಲ್ಲಿ ನಗದ ಎಸ್.ಎನ್.ಆರ್. ಆಸ್ಪತ್ರೆಗೆ ಭೇಟಿ ನೀಡಿ ಜಿಲ್ಲಾ ಶಸ್ತ್ರ ಚಿಕಿತ್ಸಾಕರಿಂದ ಮಾಹಿತಿ ಪಡೆದು ಪರಿಶೀಲನೆಯ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿ ಜಿಲ್ಲೆಯಲ್ಲಿ ಪ್ರಸ್ತುತ ೫೦೦ ಹಾಸಿಗೆ ಇದ್ದು ಅವಶ್ಯಕವಾದಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕಾಗುತ್ತದೆ. ಯಾವೂದೇ ರೀತಿ ಲೋಪ ದೋಷಗಳು, ಕೊರತೆಯಾಗದಂತೆ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಆಸ್ಪತ್ರೆಯಲ್ಲಿನ ನೀರು, ಸ್ವಚ್ಚತೆ ಅಗತ್ಯವಾದ ಅಕ್ಸಿಜನ್, ಲಸಿಕೆ, ಔಷಧಗಳ ಕುರಿತು ಜಿಲ್ಲಾ ಶಸ್ತ್ರಚಿಕಿತ್ಸೆಕರಾದ ಡಾ.ವಿಜಯಕುಮಾರ್ ಅವರಿಗೆ ದಾಸ್ತನು ಕುರಿತು ಸೂಚಿಸಲಾಗಿದೆ. ಕುಡಿಯುವ ನೀರು ಕುರಿತು ಗರ್ಭೀಣಿ ಮತ್ತು ಬಾಣಂತಿಯರಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಲಾಗಿದೆ. ನೀರಿನ ಸಮಸ್ಯೆಯುಂಟಾದರೆ ಟ್ಯಾಂಕ್‌ಗಳಿಗೆ ಯರ್‌ಗೋಳ್ ನೀರು ತುಂಬಿಸಲು ಸೂಚಿಸಲಾಗಿದೆ ಎಂದರು.

Leave a Reply

Your email address will not be published. Required fields are marked *

error: Content is protected !!