ಉದಯವಾಹಿನಿ, ವಿಜಯಪುರ: ಜೆಎನ್ 1 ವೈರಸ್ ಆತಂಕದ ಹಿನ್ನೆಲೆ ವಿಜಯಪುರ ಜಿಲ್ಲೆಯ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ ಹೇಳಿದರು.
ವಿಜಯಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸದ್ಯಕ್ಕೆ ನಮ್ಮ ಜಿಲ್ಲೆಯಲ್ಲಿ ಯಾವುದೇ ಆತಂಕ ಇಲ್ಲ. ಪಕ್ಕದ ರಾಜ್ಯ ಕೇರಳ ಹಾಗೂ ತಮಿಳುನಾಡಿನಲ್ಲಿ ಸ್ವಲ್ಪ ಆತಂಕ ಇರುವ ಕಾರಣ ಈಗಾಗಲೇ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯಿಂದ ಸುತ್ತೋಲೆ ಬಂದಿದೆ. ಜೆಎನ್ 1 ಇದು ಓಮಿಕ್ರಾನ್ ನ ಸಬ್ ವೇರಿಯಂಟ್ ಆಗಿದೆ. ಕೋವಿಡ್‍ನ ಲಕ್ಷಣಗಳೇ ಇದರಲ್ಲೂ ಇದೆ. ನಾವು ಗಾಬರಿ ಪಡುವ ಅವಶ್ಯಕತೆ ಇಲ್ಲ ಎಂದರು.
ಇನ್ನೂ 60 ವರ್ಷ ಮೇಲ್ಪಟ್ಟವರು, ಗರ್ಭಿಣಿಯರು, ವಿವಿಧ ರೋಗದಿಂದ ಬಳಲುತ್ತಿರುವವರು ಮಾಸ್ಕ್ ಧರಿಸಲೇಬೇಕು. ಗಾಬರಿ ಪಡುವ ಅವಶ್ಯಕತೆ ಇಲ್ಲ ಎಂದರು.
