ಉದಯವಾಹಿನಿ, ಬೆಂಗಳೂರು: ಐಷಾರಾಮಿ ಚಾರ್ಟರ್ಡ್ ಫ್ಲೈಟ್‌ನಲ್ಲಿ ಉದ್ದನೆಯ ಸೋಫಾ ಇರುವ ವಿಶೇಷ ವಿಮಾನದಲ್ಲಿ ಸಿಎಂ ಸಿದ್ದರಾಮಯ್ಯ, ಜಮೀರ್ ಅಹ್ಮದ್ ,ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜ್‌ ಕೂಡ ಇರುವುದು 32 ಸೆಕೆಂಡುಗಳ ವಿಡಿಯೋ ವೈರಲ್​ ಆಗಿತ್ತು.
ದೆಹಲಿಯಿಂದ ಬೆಂಗಳೂರಿಗೆ  ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ ಸಂತಸದ ಕ್ಷಣಗಳು ಎಂದು ಜಮೀರ್ ಅಹ್ಮದ್ ಖಾನ್ ಗುರುವಾರ ರಾತ್ರಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ವಿಮಾನ ಪ್ರಯಾಣದ ವಿಡಿಯೋವನ್ನು ಪೋಸ್ಟ್​ ಮಾಡಿದ್ದರು. ಈ ಕುರಿತಾಗಿ ವಿರೋಧ ಪಕ್ಷದ ನಾಯಕರು ಹಾಗೂ ಜನಸಾಮಾನ್ಯರು ವಿರೋಧ ವ್ಯಕ್ತಪಡಿಸಿದ್ದರು.
ಕರ್ನಾಟಕ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಜತೆ ಐಷಾರಾಮಿ ವಿಮಾನದಲ್ಲಿ ಪ್ರಯಾಣಿಸಿದ್ದನ್ನು ಟೀಕಿಸಿದ ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದರು.

 

Leave a Reply

Your email address will not be published. Required fields are marked *

error: Content is protected !!