ಉದಯವಾಹಿನಿ, ಬೆಂಗಳೂರು: ಬರ ಪರಿಹಾರ ಕೇಳಲು ಐಷಾರಾಮಿ ವಿಮಾನದಲ್ಲಿ ಪ್ರಯಾಣ ಬೆಳೆಸಿರುವ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿರುವ ಅವರು, ಜನರ ದುಡ್ಡು ಆಕಾಶದಲ್ಲಿ ಜಾತ್ರೆ ಸಾಮಾನ್ಯರ ಬದುಕು ಅಸಹನೀಯ ಪರಿಸ್ಥಿತಿ ತಲುಪಿದೆ ಎಂದು ಆರೋಪಿಸಿದ್ದಾರೆ.ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ ಜನರ ದುಡ್ಡು ಆಕಾಶದಲ್ಲಿ ಜಾತ್ರೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ಬರಗಾಲದಿಂದ ಬೇಯುತ್ತಿದೆ, ರೈತರು ಆತ್ಮ ಹತ್ಯೆಗೆ ಶರಣಾಗುತ್ತಿದ್ದಾರೆ, ಸಾಮಾನ್ಯರ ಬದುಕು ಅಸಹನೀಯ ಪರಿಸ್ಥಿತಿ ತಲುಪಿದೆ, ಇಂಥಾ ಗಭೀರ ಪರಿಸ್ಥಿತಿಯಲ್ಲೂ ಶ್ರೀಮಂತಿಕೆಯ ದರ್ಪ ತೋರುವ, ಮೋಜು, ಮಸ್ತಿಯೇ ತನ್ನ ಜೀವನ ಶೈಲಿ ಎಂದು ಕಿಡಿಕಾರಿದ್ದಾರೆ.
