ಉದಯವಾಹಿನಿ, ಬೀದರ್ : ವಿವಿಧ ಕೋಮಿಗೆ ಸಂಬಂಧಿಸಿದ ತಾಲೂಕಿನ ಸಿರ್ಸಿ(ಎ) ಗ್ರಾಮದ ಪ್ರೇಮಿಗಳಿಬ್ಬರು ಮನೆಯಲ್ಲಿ ತಮ್ಮಿಬ್ಬರ ಮದುವೆಗೆ ಒಪ್ಪುತ್ತಿಲ್ಲವೆಂದು ಗ್ರಾಮದ ಹೊರವಲಯದಲ್ಲಿರುವ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರೂಣ ಘಟನೆ ಶನಿವಾರ ಜರುಗಿದೆ. ಪರಿಶಿಷ್ಟ ಜಾತಿಗೆ ಸಂಬಂಧಿಸಿದ ಅದೆ ಗ್ರಾಮದ ಯುವಕ ಧನರಾಜ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವತಿ ಭಾಗ್ಯಶ್ರೀ ಎಂಬುವವರು ಮೃತ ದುರ್ದೈವಿಗಳು.
ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಯುವಕನು ತಳವಾಡೆ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. ಯುವತಿ ಎಸ್.ಎಸ್.ಎಲ್.ಸಿ ಓದುತ್ತಿದ್ದು ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ವಾಸವಿದ್ದಳು. ಶುಕ್ರವಾರ ಸಾಯಂಕಾಲ ಯುವತಿಯನ್ನು ಹಾಸ್ಟೆಲ್ ನಿಂದ ಕರೆದುಕೊಂಡು ಬಂದು ಗ್ರಾಮದ ಹೊರವಲಯದ ಔರಾದ್(ಎಸ್) ರಸ್ತೆಯಲ್ಲಿರುವ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವರು. ಬೆಳಿಗ್ಗೆ ಸ್ಥಳಕ್ಕೆ ಆಗಮಿಸಿದ ಬಗದಲ್ ಪೆÇೀಲಿಸ್ ಠಾಣೆ ಪಿ.ಎಸ್.ಐ ಪರಿಶಿಲನೆ ನಡೆಸಿದ್ದಾರೆ. ಬಗದಲ್ ಪೆÇೀಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!