ಉದಯವಾಹಿನಿ, ಮೈಸೂರು: ಮೈಸೂರು ಅರಮನೆ ಮಂಡಳಿ ವತಿಯಿಂದ ಇಂದು ಅರಮನೆ ಆವರಣದಲ್ಲಿ ಅರಮನೆ ಫಲಪುಷ್ಪ ಪ್ರದರ್ಶನ- 2023 ಕಾರ್ಯಕ್ರಮವನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನ ನವರು ಉದ್ಘಾಟಿಸಿ, ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಿ ಸಂತೋಷ ವ್ಯಕ್ತ ಪಡಿಸಿದರು.
ಕಳೆದ ಬಾರಿಯಂತೆ ಈ ವರ್ಷವೂ ಕೂಡ ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಪ್ರದರ್ಶನದಲ್ಲಿ ಜಿಲ್ಲೆಯ ಪ್ರಮುಖ ಆಕರ್ಷಕ ಕೇಂದ್ರಗಳಾದ ಸೋಮನಾಥೇಶ್ವರ ದೇವಾಲಯ, ಸಿರಿ ಧಾನ್ಯದಿಂದ ನಿರ್ಮಿಸಿದ ಮಲೆ ಮಹದೇಶ್ವರ ಪ್ರತಿಮೆ, ಹಂಪಿಯ ಕಲ್ಲಿನ ರಥ, ವಿರೂಪಾಕ್ಷ ವಿಗ್ರಹ, ಬ್ರಾಂಡ್ ಮೈಸೂರು ಲೋಗೋ, 8 ಬಾರಿ ಅಂಬಾರಿ ಹೊತ್ತ ಅರ್ಜುನ ಅನೆ ಆಕೃತಿ, ನಾಲ್ವಡಿ ಕೃಷ್ಣ ರಾಜ ಒಡೆಯರ್, ಕೆಂಪ ನಂಜಮ್ಮಣಿ, ಶ್ರಿ ಕಂತ ದತ್ತ ಒಡೆಯರ್, ಮೈಸೂರು ಅರಮನೆ ಮಂಡಳಿ, ಹಾಗೂ ವಿವಿಧ ರೀತಿಯ ಪ್ರಾಣಿಗಳ ಪ್ರತಿಮೆಗಳು ಕಂಡುಬಂದವು. ಹಣ್ಣುಗಳಿಂದ ಚಿತ್ರಿಸಿದ ಕಲಾಕೃತಿಗಳಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಗಾಂಧಿ, ಕಿತ್ತೂರು ರಾಣಿ ಚೆನ್ನಮ್ಮ, ನಾಲ್ವಡಿ ಕೃಷ್ಣರಾಜ ಒಡೆಯರ್, ರಾಜ್ಯದ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯ ಮಂತ್ರಿಗಳಾದ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್ .ಸಿ ಮಹದೇವಪ್ಪ ಆಕೃತಿಗಳು ಜನರ ಮನ ಸೆಳೆದವು. ವಿವಿಧ ರೀತಿಯ ಕಲಾಕೃತಿಗಳು, ಸ್ಪೈಡರ್ ಮ್ಯಾನ್, ಬ್ಯಾಟ್ ಮ್ಯಾನ್, ಸೂಪರ್ ಮ್ಯಾನ್ ಹೀಗೆ ಮಕ್ಕಳಿಗೆ ಪ್ರಿಯವಾಗಿರುವ ಹೂಗಳಿಂದ ಅಲಂಕೃತಗೊಂಡ ವಿವಿಧ ಕಲಾಕೃತಿಗಳು, ಸೆಲ್ಫಿ ಪಾಯಿಂಟ್, ರಾಜ್ ಕುಮಾರ್, ಕ್ರಿಸ್ ಮಸ್ ಟ್ರೀ ಗಳು ಜನರನ್ನು ಆಕರ್ಷಿಸಿದವು.

Leave a Reply

Your email address will not be published. Required fields are marked *

error: Content is protected !!