ಉದಯವಾಹಿನಿ, ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕನಾಗಿ ಕೋಟಾ ಶ್ರೀನಿವಾಸ್ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೋಟಾ ಶ್ರೀನಿವಾಸ್ ಪೂಜಾರಿ ಪರಿಷತ್ ವಿಪಕ್ಷ ನಾಯಕನನ್ನಾಗಿ ನೇಮಕ ಮಾಡಿದರು.
ಪರಿಷತ್ ವಿಪಕ್ಷ ನಾಯಕನ ಸ್ಥಾನಕ್ಕೆ ಎನ್.ರವಿಕುಮಾರ್, ಛಲವಾದಿ ನಾರಾಯಣ ಸ್ವಾಮಿ ಸೇರಿದಂತೆ ಹಲವು ನಾಯಕರ ನಡುವೆ ಪೈಪೋಟಿ ಇತ್ತು. ಅಂತಿಮವಾಗಿ ಶ್ರೀನಿವಾಸ್ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.
