ಉದಯವಾಹಿನಿ: ಚಿಕ್ಕಮಗಳೂರು: ದರ್ಗಾ ಮೇಲೆ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ದತ್ತಮಾಲಾಧಾರಿಗಳ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಚಿಕ್ಕಮಗಳೂರಿನ ಶಾಂತವೇರಿ ಗ್ರಾಮದಲ್ಲಿ ರಸ್ತೆ ಬಳಿ ಇದ್ದ ದರ್ಗಾದ ಮೇಲೆ ದಾಳಿ ನಡೆದಿತ್ತು. ಚಿಕ್ಕಮಗಳೂರಿನ ಲಿಂಗದಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧ ಐವರು ದತ್ತಮಾಲಾಧಾರಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಸಿಸಿಟಿವಿ ದೃಶ್ಯ ಆಧರಿಸಿ ಎಫ್ ಐ ಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
