ಉದಯವಾಹಿನಿ, ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಚಲಿಸುತ್ತಿದ್ದ ಕಾರಿನಲ್ಲಿ ನೋಡ ನೋಡುತ್ತಿದ್ದಂತೆ ಬೆಂಕಿ ಅವಘಡ ಸಂಭವಿಸಿದ್ದು, ಓರ್ವ ಸಜೀವ ದಹನವಾಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದ ಬಳಿ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆ ಕಾರು ಹೊತ್ತಿ ಉರಿದಿದೆ. ಕಾರಿನಲ್ಲಿ ಸಿಲುಕಿರುವ ವ್ಯಕ್ತಿ ಸಜೀವ ದಹನವಾಗಿದ್ದಾರೆ. ಬೆಂಕಿ ದುರಂತದಿಂದಾಗಿ ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್ ಸಂಭವಿಸಿದೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ದೌಡಾಯಿಸಿದ್ದಾರೆ.
