ಉದಯವಾಹಿನಿ: ಬೆಂಗಳೂರು : ‘ಕಮಲ’ ಉದುರಿ ಹೋಯ್ತು, ತೆನೆ ಹೊತ್ತ ಮಹಿಳೆ ‘ತೆನೆ’ ಎಸೆದು ಓಡಿ ಹೋದಳು ಎಂದು ಡಿಸಿಎಂ ಡಿಕೆ ಶಿವಕುಮಾರ್ ಕವನ ವಾಚನ ಮಾಡಿದರು. ಯುವನಿಧಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಬಿಜೆಪಿ ಹಾಗೂ ಜೆಡಿಎಸ್ ಕಾಲೆಳೆದರು. ಐದು ಬೆರಳು ಸೇರಿ ಒಂದು ಮುಷ್ಟಿಯಾಯಿತು. ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಅರಳಿದ ಕಮಲದ ಹೂವು ಇದನ್ನು ನೋಡಿ ಉದುರಿ ಹೋಯಿತು.ಐದು ಗ್ಯಾರಂಟಿ ನೋಡಿ ಮಹಿಳೆ ತಾನು ಹೊತ್ತ ತೆನೆಯ ಎಸೆದು ಹೋದಳು. ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಕರ್ನಾಟಕ ಸಮೃದ್ಧವಾಯಿತು. ಕರ್ನಾಟಕ ಪ್ರಬುದ್ಧವಾಯಿತು ಎಂದು ಹೇಳಿದ್ದಾರೆ. ಸಮೃದ್ಧ ಕರ್ನಾಟಕಕ್ಕಾಗಿ, ರಾಜ್ಯದ ಭವ್ಯ ಭವಿಷ್ಯಕ್ಕಾಗಿ ನವ ಕರ್ನಾಟಕ ನಿರ್ಮಾಣಕ್ಕಾಗಿ, ಗೃಹಲಕ್ಷ್ಮಿ , ಶಕ್ತಿ ಯೋಜನೆ, ಯುವನಿಧಿ, ಗೃಹಜ್ಯೋತಿ, ಅನ್ನಭಾಗ್ಯ ಜಾರಿಯಾಗಿದೆ’ ಎಂದರು.
