ಉದಯವಾಹಿನಿ,ಕೊಲ್ಹಾರ. ತಾಲ್ಲೂಕಿನ ಕಲಬುರ್ಕಿ ಗ್ರಾಮದಲ್ಲಿ ಗ್ರಾ.ಪಂ ವ್ಯಾಪ್ತಿಯ ಸರಕಾರಿ ಜಾಗೆಯಲ್ಲಿ ವಾಸ್ತವ್ಯ ಮಾಡುತ್ತಿರುವ ಕೆಲ ಕುಟುಂಬಗಳಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಸದರಿ ಜಾಗೆ ಹಾಗೂ ಪಕ್ಕದ ಕೆರೆ ಅರಣ್ಯ ಇಲಾಖೆಗೆ ಸಂಬಂಧಿಸಿದ್ದು ಕೂಡಲೇ ಜಾಗೆಯನ್ನು ತೆರವು ಮಾಡಲು ಸೂಚನೆ ನೀಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಕಬ್ಬು ಬೆಳೆಗಾರರ ಒಕ್ಕೂಟದಿಂದ ಪ್ರತಿಭಟನೆಯನ್ನು ಪಟ್ಟಣದ ಬಸವೇಶ್ವರ ಸರ್ಕಲ್ ದಿಂದ ತಹಶೀಲ್ದಾರ್ ಕಚೇರಿವರೆಗೆ ಮೆರವಣಿಗೆ ನಡೆಸಿ ತಹಶೀಲ್ದಾರ ಪಿ.ಜಿ ಪವಾರ್ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘಟನೆ ಅಧ್ಯಕ್ಷ ಸೋಮು ಬಿರಾದಾರ ಮಾತನಾಡುತ್ತಾ ಕಲಬುರ್ಕಿ ಗ್ರಾಮದ ಸರ್ವೆ ಸಂಖ್ಯೆ ೬ ರ ವ್ಯಾಪ್ತಿಯಲ್ಲಿ ಸುಮಾರು ಕುಟುಂಬಗಳು ಅನೇಕ ವರ್ಷಗಳಿಂದ ಗುಡಿಸಲು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದು ಬಡ ಕುಟುಂಬಗಳು ವಾಸಿಸುತ್ತಿರುವ ಜಾಗೆ ಗ್ರಾ.ಪಂ ವ್ಯಾಪ್ತಿಗೆ ಒಳಪಡುತ್ತದೆ, ಅರಣ್ಯ ಇಲಾಖೆಯ ಅಧಿಕಾರಿಗಳು ಏಕಾಏಕಿ ಜಾಗೆ ಹಾಗೂ ಪಕ್ಷದ ಕೆರೆ ಅರಣ್ಯ ಇಲಾಖೆಗೆ ಸಂಬಂಧಿಸಿದ್ದು ಕೂಡಲೇ ವಾಸಿಸುತ್ತಿರುವ ಜಾಗೆಯನ್ನು ತೆರವುಗೊಳಿಸಬೇಕು.ಎಂದು ವಾಸ ಮಾಡುತ್ತಿರುವ ಕುಟುಂಬಗಳಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಕಿರುಕುಳು ನೀಡಿ ತೆರವಿಗೆ ಒತ್ತಡ ಹೇರುತ್ತಿದ್ದಾರೆ ಇದು ಖಂಡನಿಯ ಕೂಡಲೇ ತೆರವು ಕಾರ್ಯಾಚರಣೆ ತಡೆಹಿಡಿಯಬೇಕು ಎಂದು ಆಗ್ರಹಿಸಿದರು.ರೈತ ಮುಖಂಡ ರಾಹುಲ್ ಕುಬಕಡ್ಡಿ ಮಾತನಾಡುತ್ತಾ ರೈತ ಈ ದೇಶದ ಬೆನ್ನೆಲುಬು ಎನ್ನುವುದು ಸರ್ವವಿಧಿತ ರೈತಾಪಿವರ್ಗದ ನೋವು ಆಳುವ ಸರಕಾರ ಅರಿಯಬೇಕಿದೆ. ಕಲಬುರ್ಕಿ ಗ್ರಾಮದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಾಗೆಯಲ್ಲಿ ವಾಸಿಸುತ್ತಿರುವ ಕುಟುಂಬಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದೆ ಎಂದು ತಮ್ಮ ಆಕ್ರೋಶಹೊರಹಾಕಿದರು.ಈ ಸಂದರ್ಭದಲ್ಲಿ ಕಲಬುರ್ಕಿ ಗ್ರಾಮದ ಮಹಿಳೆಯರು ಮತ್ತು ಎಲ್ಲಾ ರೈತ ಪದಾಧಿಕಾರಿಗಳು ಎಲ್ಲರೂ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು.

