ಉದಯವಾಹಿನಿ, ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಲು ಹೈಕೋರ್ಟ್ ನಿರಾಕರಿಸಿದೆ.ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರುವಂತೆ ವಕೀಲ ಎನ್.ಪಿ.ಅಮೃತೇಶ್ ಎಂಬುವವರು ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾ.ಆರ್.ನಟರಾಜ್, ಕೆ.ವಿ.ಅರವಿಂದ್ ಅವರಿದ್ದ ಪೀಠ, ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಲು ನಿರಾಕರಿಸಿದೆ. ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಿದರೆ ಹೊರ ಪ್ರದೇಶಗಳಿಗೆ ತೆರಳಿ ಆಚರಣೆ ಮಾಡ್ತಾರೆ. ಸರ್ಕಾರ ಈ ಬಗ್ಗೆ ಯಾವುದೇ ನಿಯಂತ್ರಣ ವಿಧಿಸಿಲ್ಲ. ಕೋವಿಡ್ ಗೆ ಪ್ರಸ್ತುತ ಆತಂಕ ಪಡುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

Leave a Reply

Your email address will not be published. Required fields are marked *

error: Content is protected !!