ಉದಯವಾಹಿನಿ, ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೀಗ ಮತ್ತೋರ್ವರಲ್ಲಿ JN.1 ಸೋಂಕು ದೃಢಪಟ್ಟಿದೆ.ವಿಜಯಪುರದಿಂದ ಬೆಂಗಳೂರಿಗೆ ಆಗಮಿಸಿದ್ದ 40 ವರ್ಷದ ವ್ಯಕ್ತಿಯಲ್ಲಿ JN.1 ಸೋಂಕು ಪತ್ತೆಯಾಗಿದೆ. ವಿಜಯಪುರದ ನಿಡಗುಂದಿ ಮೂಲದ ವ್ಯಕ್ತಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಹಾರ್ಟ್ ಆಪರೇಷನ್ ಗಾಗಿ ಬಂದಿದ್ದರು.ಡಿಸೆಂಬರ್ 25ರಂದು ಅವರಿಗೆ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಇದೀಗ ಅವರಿಗೆ JN.1 ಸೋಂಕು ಇರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರನ್ನು ಪ್ರತ್ಯೇಕವಾಗಿ ಐಸೋಲೆಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
