ಉದಯವಾಹಿನಿ, ಬೆಂಗಳೂರು : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ೨ನೇ ಟರ್ಮಿನಲ್‌ನಿಂದ ಫ್ಲೈ ಬಸ್ ಸೇವೆಗೆ ಚಾಲನೆ ನೀಡಲಾಗಿದೆ..
ಸಾರಿಗೆ ಇಲಾಖೆಯ ವತಿಯಿಂದ ಸಾರ್ವಜನಿಕರ ಪ್ರಯಾಣಕ್ಕಾಗಿ ಇಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಹಾಗೂ ಆಹಾರ ಸಚಿವರಾದ ಕೆಹೆಚ್.ಮುನಿಯಪ್ಪ ನವರು ಚಾಲನೆ ನೀಡಿದರು.
ಪ್ರಸ್ತುತ ವಿಮಾನನಿಲ್ದಾಣದಿಂದ ಕೆಎಸ್‌ಆರ್‌ಟಿಸಿಯ ಒಟ್ಟು ೧೩ ಬಸ್‌ಗಳು ಪ್ರತಿನಿತ್ಯ ಮೈಸೂರು, ಕುಂದಾಪುರ ಹಾಗೂ ಮಡಿಕೇರಿ ಮಾರ್ಗಗಳಲ್ಲಿ ಸಂಚರಿಸಲಿವೆ. ಬಿಎಂಟಿಸಿ ವತಿಯಿಂದ ಪ್ರತಿದಿನ ೧೩೭ ಹವಾನಿಯಂತ್ರಿತ ಬಸ್‌ಗಳು ಸಂಚಾರ ನಡೆಸಿವೆ. ವಿಮಾನನಿಲ್ದಾಣದ ಲಾಂಜ್‌ನಲ್ಲಿ ಕುಡಿಯುವ ನೀರು ಹಾಗೂ ಶೌಚಾಲಯದ ವ್ಯವಸ್ಥೆ ಕಲ್ಪಿಸಲಾಗಿದ್ದು, ಬಸ್‌ಗಳ ಕಾರ್ಯಾಚರಣೆ ಸಮಯ ಡಿಜಿಟಲ್ ಫಲಕಗಳು ಸಾರ್ವಜನಿಕ ಉದ್ಘೋಷಣಾ ವ್ಯವಸ್ಥೆ ಮಾಡಲಾಗಿದೆ. ವಿಮಾನ ನಿಲ್ದಾಣದಿಂದ ಬೆಂಗಳೂರು ನಗರಕ್ಕೆ ಸಂಚಾರ ಮಾಡಲು ಬಿಎಂಟಿಸಿ ಮತ್ತು ವಾಯುವಜ್ರದ ಎಲೆಕ್ಟ್ರಿಕ್ ಬಸ್‌ಗಳ ಸೇವೆಯನ್ನು ಕಲ್ಪಿಸಿದ್ದು, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬಸ್ ಗಳನ್ನು ನೀಡಲು ಸಾರಿಗೆ ಸಚಿವರು ಒಪ್ಪಿಗೆ ನೀಡಿದರು.
ದೇವನಹಳ್ಳಿ ತಾಲ್ಲೂಕಿನ ತೂಬಗೆರೆ ಪಂಚಾಯತಿಗೆ ಬಸ್‌ಗಳು ಅನಾನುಕೂಲ ಇರುವುದರಿಂದ ಅಲ್ಲಿಗೆ ಸಂಪರ್ಕ ಕಲ್ಪಿಸಲು ಸಾರಿಗೆ ಹಾಗೂ ಮುಜರಾಯಿ ಸಚಿವರಿಗೆ ಮನವಿಯನ್ನು ನೀಡಲಾಯಿತು. ಹಾಗೆಯೇ ದೊಡ್ಡಬಳ್ಳಾಪುರ ತಾಲ್ಲೂಕಿನ ಎಸ್‌ಎಸ್ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಭಕ್ತಾದಿಗಳು ಬರುವುದರಿಂದ ಅಲ್ಲಿ ಹೆಚ್ಚಿನ ವ್ಯವಸ್ಥೆಗಳು ಹಾಗೂ ಅನ್ನ ದಾಸೋಹ ಭವನವನ್ನು ನಿರ್ಮಾಣ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕೆಹೆಚ್ ಮುನಿಯಪ್ಪರವರು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಇದೇ ಸಂದರ್ಭದಲ್ಲಿ ಮನವಿಯನ್ನು ನೀಡಲಾಯಿತು.
