ಉದಯವಾಹಿನಿ, ಬೆಂಗಳೂರು: ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಈಚರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟಿರುವ ಘಟನೆ ತಲಘಟ್ಟಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಭುವನೇಶ್ವರಿ ನಗರ ನಿವಾಸಿ ಶಿವ (47) ಮೃತಪಟ್ಟ ಈಚರ್ ವಾಹನದ ಚಾಲಕ.
ಇಂದು ಬೆಳಗ್ಗೆ 6.30ರ ಸುಮಾರಿನಲ್ಲಿ ನೈಸ್ ರಸ್ತೆಯ ನಾಗೇಗೌಡನ ಪಾಳ್ಯ ಬ್ರಿಡ್ಜ್ ರಸ್ತೆಯಲ್ಲಿ ಕೊಯಮತ್ತೂರು ಕಡೆಗೆ ಲಾರಿ ಹೋಗುತ್ತಿತ್ತು. ಇದೇ ಮಾರ್ಗವಾಗಿ ಕೋಳಿಗಳನ್ನು ತುಂಬಿಕೊಂಡು ಹೋಗುತ್ತಿದ್ದ ಈಚರ್ ವಾಹನ ಅತಿವೇಗದಿಂದಾಗಿ ನಿಯಂತ್ರಣ ತಪ್ಪಿ ಹಿಂದಿನಿಂದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.
‘ಮೋದಿ ಮತ್ತೆ ಬರಲಿದ್ದಾರೆ’ ಎಂಬ ಘೋಷ ವಾಕ್ಯದೊಂದಿಗೆ ಅಖಾಡಕ್ಕೆ ಧುಮುಕಿದ ಬಿಜೆಪಿ
ಸುದ್ದಿ ತಿಳಿದು ತಲಘಟ್ಟಪುರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!