ಉದಯವಾಹಿನಿ, ಹೊನ್ನಾಳಿ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹೊನ್ನಾಳಿ ವತಿಯಿಂದ ರಾಷ್ಟ್ರಕವಿ ಕುವೆಂಪು ಜನ್ಮ ದಿನಾಚರಣೆ ಅಂಗವಾಗಿ ವಿಶ್ವಮಾನವ ದಿನಾಚರಣೆಯನ್ನು ತಾಲೂಕು ಆಡಳಿತದಿಂದ ಹಮ್ಮಿಕೊಳ್ಳಲಾಗಿತ್ತು. ಕುವೆಂಪು ಅವರ ಬಗ್ಗೆ ಉಪನ್ಯಾಸಕ ನಾಗೇಶ್ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಡಿ.ಜಿ ಶಾಂತನಗೌಡ್ರು, ತಾಲೂಕು ದಂಡಾಧಿಕಾರಿ ಪಟ್ಟೆರಾಜೇಗೌಡ್ರು, ಉಪ ತಹಶೀಲ್ದಾರ್ ಸುರೇಶ್, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮುರಿಗೆಪ್ಪ, ಹೊನ್ನುಡಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಷಣ್ಮುಖಯ್ಯ, ತಾಲ್ಲೂಕು ದೈಹಿಕ ಶಿಕ್ಷಣ ಡಿಪಿಓ ಈಶ್ವರಪ್ಪ, ತಾಲೂಕು ಎಲ್ಲಾ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಭಾಗವಹಿಸಿದ್ದರು.
