ಉದಯವಾಹಿನಿ, ಮಾಲೂರು : ಪಟ್ಟಣದ ಶ್ರೀ ಮಾಸ್ತಿ ವೆಂಕಟೇಶ ಅಯ್ಯಂಗಾರ್ ರಂಗಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕ ಆಡಳಿತದ ವತಿಯಿಂದ ಜನವರಿ ೪ರಂದು ಸಾರ್ವಜನಿಕರ ಕುಂದುಕೊರತೆಗಳ ಅಹಃವಾಲು ಸ್ವೀಕರಿಸುವ ಜನಸ್ಪಂದನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಸಾರ್ವಜನಿಕರು ಜನಸ್ಪಂದನಾ ಕಾರ್ಯಕ್ರಮಕ್ಕೆ ಆಗಮಿಸಿ ತಮ್ಮ ಆಹವಾಲುಗಳನ್ನು ಸಲ್ಲಿಸುವಂತೆ ತಹಸಿಲ್ದಾರ್ ಕೆ ರಮೇಶ್ ಹೇಳಿದರು
ಜನಸ್ಪಂದನ ಸಭೆ ನಡೆಯುವ ಪಟ್ಟಣದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ರಂಗಮಂದಿರ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಮಾತನಾಡಿದರು
ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಮುಖ್ಯಮಂತ್ರಿಗಳ ಬಳಿ ಹೋಗುತ್ತಿದ್ದರು ಅದನ್ನು ತಪ್ಪಿಸಿ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತಗಳು ಜನಸ್ಪಂದನಾ ಸಭೆಯನ್ನು ಏರ್ಪಡಿಸಿ ಜನಸ್ಪಂದನಾ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲು ಸರ್ಕಾರ ಆದೇಶಿಸಿದ್ದು ಅದರಂತೆ ಜಿಲ್ಲಾಡಳಿತ ಈಗಾಗಲೇ ತಾಲುಕು ಕೇಂದ್ರದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮೊದಲನೇ ಸಾರ್ವಜನಿಕ ಜನಸ್ಪಂದನ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಾಗಿದೆ ಕೆಲವು ಸಮಸ್ಯೆಗಳನ್ನು ದಾಖಲಾತಿಗಳನ್ನು ಪರಿಶೀಲಿಸಿ ಬಗೆಹರಿಸಲಾಗಿದೆ
ಜಿಲ್ಲಾಡಳಿತವು ತಾಲೂಕು ಕೇಂದ್ರದಲ್ಲಿ ಎರಡನೇ ಜನಸ್ಪಂದನ ಸಭೆಯನ್ನು ಜನವರಿ ೪ ರಂದು ಜನಸ್ಪಂದನ ಕಾರ್ಯಕ್ರಮವನ್ನು ಪುರಸಭಾ ಆವರಣದಲ್ಲಿರುವ ಮಾಸ್ತಿ ವೆಂಕಟೇಶ ಅಯ್ಯಂಗಾರ್ ರಂಗಮಂದಿರದಲ್ಲಿ ಹಮ್ಮಿಕೊಂಡಿದೆ.

Leave a Reply

Your email address will not be published. Required fields are marked *

error: Content is protected !!