ಉದಯವಾಹಿನಿ, ಬೆಂಗಳೂರು : ರಾಜ್ಯದಲ್ಲಿ ಶನಿವಾರ 201 ಕೋವಿಡ್ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 833ಕ್ಕೆ ತಲುಪಿದೆ. ದಿನದ ಸೋಂಕು ಪ್ರಮಾಣ ದರ ಶೇ. 2.84 ಇದೆ.
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 7,060 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಬೆಂಗಳೂರಿನಲ್ಲಿ 69, ಮೈಸೂರು 25, ಬೆಂಗಳೂರು ಗ್ರಾಮಾಂತರ 10, ಚಾಮರಾಜನಗರ ಮತ್ತು ದಕ್ಷಿಣ ಕನ್ನಡ 9, ಹಾಸನ 8, ಮಂಡ್ಯ ಮತ್ತು ತುಮಕೂರು 7, ಬಳ್ಳಾರಿ ಮತ್ತು ವಿಜಯನಗರ 6, ಚಿತ್ರದುರ್ಗ ಮತ್ತು ರಾಮನಗರ 5, ಬಾಗಲಕೋಟೆ, ಬೆಳಗಾವಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಮತ್ತು ಧಾರವಾಡ 4, ಶಿವಮೊಗ್ಗ 3, ಬೀದರ್, ದಾವಣಗೆರೆ, ಗದಗ ತಲಾ ಇಬ್ಬರು ಹಾಗೂ ಹಾವೇರಿ, ಕಲಬುರಗಿ, ಕೊಡಗು, ಕೋಲಾರ, ರಾಯಚೂರು ಮತ್ತು ಉಡುಪಿಯಲ್ಲಿ ತಲಾ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ.ಮೈಸೂರಿನ 74 ವರ್ಷದ ವೃದ್ಧರೊಬ್ಬರು ತೀವ್ರ ಉಸಿರಾಟದ ಸಮಸ್ಯೆಯಿಂದ ಡಿ. 23ರಂದು ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಲಿಸದೆ 28ರಂದು ಮೃತಪಟ್ಟಿದ್ದಾರೆ. ಇವರು ಕೋವಿಡ್ ಮುನ್ನೆಚ್ಚರಿಕೆ ಲಸಿಕೆಯನ್ನೂ ಪಡೆದಿದ್ದರು. ಇದರೊಂದಿಗೆ ರಾಜ್ಯದಲ್ಲಿ ಕೋವಿಡ್ ಮರಣ ಪ್ರಮಾಣ ದರ ಶೇ. 0.49 ಇದೆ.
ರಾಜ್ಯದಲ್ಲಿ ಕೋವಿಡ್ ಸೋಂಕಿತರಲ್ಲಿ 783 ಮಂದಿ ಮನೆ ಆರೈಕೆಯಲ್ಲಿದ್ದು, 50 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಾಗಿದ್ದಾರೆ. ಇವರಲ್ಲಿ 15 ಮಂದಿ ತುರ್ತು ನಿಗಾ ಘಟಕದಲ್ಲಿ 15 ಮಂದಿ ಹಾಗೂ ಸಾಮಾನ್ಯ ವಾರ್ಡ್‌ನಲ್ಲಿ 35 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!