ಉದಯವಾಹಿನಿ, ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೊತೆಗೆ ರಾಜ್ಯದಲ್ಲಿ ಚಳಿ ಮುಂದುವರಿಯಲಿದೆ ಎಂದು ಹೇಳಿದೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹೊಸ ವರ್ಷದಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಮಗಳೂರು, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ವಿಜಯಪುರ, ಬೀದರ್, ಕೊಪ್ಪಳ ಮತ್ತು ಕೋಲಾರ ಭಾಗದಲ್ಲಿ ಚಳಿ ಮುಂದುವರೆಯಲಿದೆ. ಇಲ್ಲಿ ಕನಿಷ್ಠ ತಾಪಮಾನ ದಾಖಲಾಗಿದೆ.
ಮೂರು ದಿನಗಳ ಕಾಲ ಮಳೆಯಾಗಲಿದೆ. ಮಳೆಯೊಂದಿಗೆ ಚಳಿ ಮುಂದುವರಿಯಲಿದೆ. ರಾಜ್ಯದ ಕೆಲವೆಡೆ ಮಳೆಯಾದರೆ, ಕೆಲವೆಡೆ ಚಳಿ ಇರಲಿದೆ. ೧ರಿಂದ ೩ರವರೆಗೆ ರಾಜ್ಯದಲ್ಲಿ ಮಳೆಯಾಗಲಿದೆ. ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಲಿದೆ. ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇರುತ್ತದೆ. ಸಂಜೆ ಅಥವಾ ರಾತ್ರಿ ಮಳೆಯಾಗುವ ಸಾಧ್ಯತೆ ಇದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಲಘು ಮಳೆಯಾಗಲಿದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಜಿಟಿಜಿಟಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
