ಉದಯವಾಹಿನಿ, ಬೆಂಗಳೂರು: ಸರಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ (ಎಂಎಸ್‌ಐಎಲ್) ಇಲ್ಲಿನ ಬಸವೇಶ್ವರ ನಗರದ ತಿಮ್ಮಯ್ಯ ರಸ್ತೆಯಲ್ಲಿ ಹೊಸದಾಗಿ ಆರಂಭಿಸಿರುವ ಸರ್ಕಾರಿ ಪ್ರೀಮಿಯಂ ಮದ್ಯ ಮಾರಾಟ ಮಳಿಗೆಯನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್ ನೂತನ ಇಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಮಧ್ಯಮ ವರ್ಗದಿಂದ ಹಿಡಿದು ಸಮಾಜದ ಪ್ರತಿಯೊಂದು ವರ್ಗದ ಗ್ರಾಹಕರನ್ನೂ ಸೆಳೆಯುವುದು ಎಂಎಸ್‌ಐಎಲ್ ನ ಗುರಿಯಾಗಿದೆ. ಇದರಂತೆ, ಹೊಸ ರೂಪ ಪಡೆದಿರುವ ಈ ಬೋಟಿಕ್ ನಲ್ಲಿ ಸಾಮಾನ್ಯ ಬೆಲೆಯಿಂದ ಹಿಡಿದು ಅತ್ಯಂತ ದುಬಾರಿ ಬೆಲೆಯ ಬ್ರಾಂಡೆಡ್ ಮದ್ಯದ ಉತ್ಪನ್ನಗಳು ಸುಲಭವಾಗಿ ಸಿಗಲಿದೆ. ಚಿತ್ತಾಕರ್ಷಕ ಒಳಾಂಗಣ ವಿನ್ಯಾಸ ಮತ್ತು ಗ್ರಾಹಕರಿಗೆ ಹಿತಕರ ಅನುಭವ ಸಿಗುವಂತೆ ಮಾಡಲು ಇಲ್ಲಿ ಆದ್ಯತೆ ಕೊಡಲಾಗಿದ್ದು, ಜಾಗತಿಕ ಗುಣಮಟ್ಟದ ಮಾಲ್ ರೀತಿಯಲ್ಲಿ ಈ ಪ್ರೀಮಿಯಂ ಬೋಟಿಕ್ ಇದೆ” ಎಂದರು.
