ಉದಯವಾಹಿನಿ, ಬೆಂಗಳೂರು: ಇತ್ತೀಚೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿಯಾಗಿದ್ದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್, ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ಮನೆಗೆ ಭೇಟಿ ನೀಡಿ, ಕೆಲ ಕಾಲ ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಚರ್ಚೆ ನಡೆಸಿದರು.ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್, ಹಲವು ಬಿಜೆಪಿ ನಾಯಕರು ಡಿಸಿಎಂ ಅವರನ್ನು ಭೇಟಿಯಾಗಿದ್ದಾರೆ ಎಂದರು.ಕೆಲ ಬಿಜೆಪಿಯವರು ರಾತ್ರಿ ಬಂದು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗುತ್ತಾರೆ. ಮತ್ತೆ ಕೆಲವರು ಮಾಧ್ಯಮಗಳ ಕಣ್ತಪ್ಪಿಸಿ ಬಂದು ಭೇಟಿಯಾಗುತ್ತಾರೆ. ನಾನು ಡಿ.ಕೆ.ಶಿವಕುಮಾರ್ ಅವರನ್ನು ರಾಜಾರೋಷವಾಗಿ ಭೇಟಿಯಾಗುತ್ತೇನೆ. ಕೆಲವರ ಹಾಗೆ ಕತ್ತಲಲ್ಲಿ ಬಂದು ಹೋಗುವುದನ್ನು ಮಾಡಲ್ಲ ಎಂದು ಹೇಳಿದರು.

ನಾನು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾಗಲೂ ಸಾಕಷ್ಟು ಜನರು ಬಂದು ಹೋಗಿದ್ದಾರೆ. ನೀವು ಅವರನ್ನು ಗಮನಿಸಿಲ್ಲ. ಯಶವಂತಪುರ ಶಾಸಕರನ್ನು ಮಾತ್ರ ಗಮನಿಸಿದ್ದೀರಾ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!