ಉದಯವಾಹಿನಿ, ಹುಬ್ಬಳ್ಳಿ: ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾ ಮಂದಿರದಲ್ಲಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಭಾನುವಾರ ಕುಟುಂಬ ಸಂಭ್ರಮ-2023 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಎಂ.ಆರ್. ಪಾಟೀಲ, ಸಮಾಜವನ್ನು ತಿದ್ದುವ ಹಾಗೂ ತಪ್ಪನ್ನು ಎತ್ತಿ ತೋರಿಸುವ ಶಕ್ತಿ ಪತ್ರಕರ್ತರಿಗಿದೆ. ಸಮಾಜದ ಬದಲಾವಣೆಯಲ್ಲಿ ಅವರ ಪಾತ್ರ ಮಹತ್ತರವಾಗಿದೆ. ಸದಾಕಾಲ ಕೆಲಸದ ಒತ್ತಡದಲ್ಲಿರುವ ಅವರು, ಕುಟುಂಬ ಸಂಭ್ರಮದ ಮೂಲಕ ಜೊತೆಯಾಗುತ್ತಿರುವುದು ಸಂತಸದ ವಿಷಯ ಎಂದರು.
ಶಾಸಕ ಮಹೇಶ ಟಿಂಗಿನಕಾಯಿ ಮಾತನಾಡಿದರು. ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಪತ್ರಕರ್ತರಿಗೆ ಬಹುಮಾನ ಹಾಗೂ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಸಂಘದ ಅಧ್ಯಕ್ಷ ಲೋಚನೇಶ ಹೂಗಾರ, ಕಾರ್ಯದರ್ಶಿ ಸುಶೀಲೇಂದ್ರ ಕುಂದರಗಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಗಣಪತಿ ಗಂಗೊಳ್ಳಿ ಇದ್ದರು.
