ಉದಯವಾಹಿನಿ, ಬೆಂಗಳೂರು: ಹುಬ್ಬಳ್ಳಿಯಲ್ಲಿ ಕರಸೇವಕನ ಬಂಧನವನ್ನು ಮುಂದಿಟ್ಟುಕೊಂಡು ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ನಾವಿನ್ನೂ ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ನಡೆಯುತ್ತಿರುವ ರಾಜಕೀಯ ನಾಟಕ ಎಂದು ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಈಗಾಗಲೇ ಗೃಹ ಸಚಿವರು ಸ್ಪಷ್ಟ ಪಡಿಸಿದ್ದಾರೆ. ನಾವು ಯಾರಿಗೂ ತೊಂದರೆ ಕೊಡುವುದಿಲ್ಲ. ಬಾಕಿ ಇದ್ದ ಪ್ರಕರಣಗಳಲ್ಲಿ ದೇಶಕ್ಕೆ, ರಾಜ್ಯಕ್ಕೆ ಅಗೌರವ ತರುವವರು ಮತ್ತು ಅಶಾಂತಿ ಸೃಷ್ಟಿಸುವವರ ವಿರುದ್ಧ ಮೊದಲಿನಿಂದಲೂ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಅದರಂತೆ ಈಗಲೂ ಕ್ರಮ ಕೈಗೊಂಡಿದ್ದಾರ ಎಂದರು.
