ಉದಯವಾಹಿನಿ, ಬೆಂಗಳೂರು :  ಕರಸೇವಕರ ಬಂಧನವಾಗಿದೆ ಎಂದು ಬೀದಿಗಿಳಿದಿರುವ ಬಿಜೆಪಿ ನಾಯಕರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕ್ರಿಮಿನಲ್‍ಗಳಿಗೆ ಜಾತಿ, ಧರ್ಮದ ಬಣ್ಣಕಟ್ಟಿ ಪ್ರತಿಭಟಿಸುವ ದುಸ್ಥಿತಿ ರಾಷ್ಟ್ರೀಯ ಪಕ್ಷಕ್ಕೆ ಬರಬಾರದಿತ್ತು ಎಂದು ಲೇವಡಿ ಮಾಡಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ನಾಲ್ಕು ವರ್ಷಗಳ ಕಾಲ ದುರಾಡಳಿತ ಮತ್ತು ಭ್ರಷ್ಟಾಚಾರದ ಹಗರಣಗಳಲ್ಲಿಯೇ ಕಾಲ ಕಳೆದಿದ್ದ ಭಾರತೀಯ ಜನತಾ ಪಕ್ಷಕ್ಕೆ ನಮ್ಮ ಸರ್ಕಾರದ ಸಾಧನೆಗಳಿಗೆ ವ್ಯಕ್ತವಾಗುತ್ತಿರುವ ಜನಸ್ಪಂದನೆÀ ದಿಗಿಲು ಹುಟ್ಟಿಸಿದೆ. ಇದಕ್ಕಾಗಿ ಹುಬ್ಬಳ್ಳಿಯ ಕ್ರಿಮಿನಲ್ ಆರೋಪಿಯೊಬ್ಬನ ಬಂಧನದ ಎಳೆ ಹಿಡಿದುಕೊಂಡು ನೇತಾಡುತ್ತಿದ್ದಾರೆ. ಅಪರಾಗಳಿಗೆ ಜಾತಿ,ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ ಎನ್ನುವುದನ್ನು ಬಿಜೆಪಿ ನಾಯಕರು ಅರ್ಥಮಾಡಿಕೊಳ್ಳಬೇಕು.
ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಬಂಧಿಸಿ ಜೈಲಿಗಟ್ಟಿದ್ದರು. ಯಡಿಯೂರಪ್ಪನವರಿಗಿಂತ ದೊಡ್ಡ ಹಿಂದೂ? ರಾಮ ಭಕ್ತ ಯಾರಿದ್ದಾರೆ? ಹಾಗಿದ್ದರೆ ಆಗಿನ ಸರ್ಕಾರ ಹಿಂದು ವಿರೋಧಿಯೇ? ಬಿಜೆಪಿ ಬಿಟ್ಟು ಬಿಡಿ, ಅದರ ಪರಿವಾರದ ನಾಯಕರು ಕೂಡಾ ಹಿಂದೂ ಯಡಿಯೂರಪ್ಪನವರನ್ನು ಬಂಧಿಸಿದ ಸರ್ಕಾರ ಹಿಂದು ವಿರೋಧಿ ಎಂದು ಕೂಗಾಡಲಿಲ್ಲವಲ್ಲ? ಈಗ ಯಾಕೆ ಈ ಕೂಗಾಟ? ಎಂದು ಪ್ರಶ್ನಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!