ಉದಯವಾಹಿನಿ, ಬೆಂಗಳೂರು: ಹುಬ್ಬಳ್ಳಿಯಲ್ಲಿ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನವನ್ನು ಖಂಡಿಸಿ ಬಿಜೆಪಿ ನಾಯಕರು ನಡೆಸುತ್ತಿರುವ ಪ್ರತಿಭಟನಾ ಅಭಿಯಾನಕ್ಕೆ ಕಾಂಗ್ರೆಸ್ ಕೌಂಟರ್ ನೀಡುವ ಅಭಿಯಾನ ಶುರು ಮಾಡಿದೆ. ನಿನ್ನೆಯಷ್ಟೇ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರಾದ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹಾಗೂ ಇತರ ನಾಯಕರನ್ನು ಬಂಧಿಸಲಾಗಿತ್ತು.
ಈಗ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿರುವುದರಿಂದ ಕಾಂಗ್ರೆಸ್ ಈಗ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಕೌಂಟರ್ ಅಭಿಯಾನ ನಡೆಸುತ್ತಿದೆ. ಹಿಂದೆ ರಾಜ್ಯದಲ್ಲಿ ಲಂಚ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೆಸರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಎಳೆದುತಂದು ಬಿವೈ ವಿಜಯೇಂದ್ರ ಅವರನ್ನು ಕಾಂಗ್ರೆಸ್ ಬಿಜೆಪಿಗರೆಲ್ಲರೂ “ನನ್ನನ್ನೂ ಬಂಧಿಸಿ” ಎಂದು ಒತ್ತಾಯಿಸುತ್ತಿರುವುದು ತಾವು ಮಾಡಿದ ಅಕ್ರಮಗಳ, ಹಗರಣಗಳ ಪ್ರಾಯಶ್ಚಿತ್ತಕ್ಕಾಗಿಯೇ? ಆಗಿದೆ. ಹೀಗಾಗಿ ನಾನು ಆರ್‌ಟಿಜಿಎಸ್ ಮೂಲಕ ಲಂಚ ಪಡೆದಿದ್ದೇನೆ. 40,000 ಕೋಟಿ ಅಕ್ರಮದಲ್ಲಿ ಪಾಲುದಾರ ನನ್ನನ್ನೂ ಬಂಧಿಸಿ ಎಂಬ ಪೋಸ್ಟರ್ ಹಿಡಿದಿರುವ ಚಿತ್ರ ಬಿತ್ತರಿಸಿ ಪ್ರತಿಕ್ರಿಯೆ ನೀಡಿದೆ. ಅದರಂತೆ ಬಿಜೆಪಿ ನಾಯಕರು ನಿಜವಾಗಿಯೂ ಹಿಡಿದು ಕೂರಬೇಕಾದ ಪೋಸ್ಟರ್ ಹೀಗಿರಬೇಕು. ಸಿಟಿ ರವಿ ಅವರೇ, ನಿಮ್ಮನ್ನು ಬಂಧಿಸಬೇಕಾದ ಕಾರಣಗಳು ಬೇರೆ ಇವೆಯಲ್ಲವೇ? ಎಂದು ಪ್ರಶ್ನಿಸಿರುವ ಕಾಂಗ್ರೆಸ್ ನಾನು ಕಾರು ಚಲಾಯಿಸಿ ಇಬ್ಬರ ಹತ್ಯೆ ಮಾಡಿದ್ದೇನೆ. ನನ್ನನ್ನೂ ಬಂಧಿಸಿ ಎಂದು ಪೋಸ್ಟರ್ ಬಿಡುಗಡೆ ಮಾಡಿದೆ. ಹಾಗೆಯೇ ಬಿಜೆಪಿಯ ನನ್ನನ್ನೂ ಬಂಧಿಸಿ ಎನ್ನುತ್ತಿರುವ ಕಾರ್ಕಳ ಸುನೀಲ್ ಕುಮಾರ್ ಅವರೇ, ಪರಶುರಾಮ ಮೂರ್ತಿಗೆ ಕಂಚಿನ ಬದಲು ಫೈಬರ್ ಹಾಕಿದ್ದಕ್ಕೆ ನಿಮ್ಮನ್ನು ಬಂಧಿಸಬೇಕೆ? ಅಥವಾ ಸರ್ಕಾರದ ಸಿಮೆಂಟ್ ಕಳ್ಳತನದ ಆರೋಪಕ್ಕಾಗಿ ಬಂಧಿಸಬೇಕೆ ರಾಮನ ಹೆಸರಲ್ಲಿ ರಾವಣನ ಕೆಲಸ ಮಾಡುವ ಆರೋಪಿಗಳನ್ನು ಬಂಧಿಸಬೇಕಲ್ಲವೇ? ಎಂದು ಪ್ರಶ್ನಿಸಿ ಪೋಸ್ಟರ್ ಬಿಡುಗಡೆ ಮಾಡಿದೆ.
