ಉದಯವಾಹಿನಿ ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ರೇಸ್ ಕೋರ್ಸ್ ರಸ್ತೆ ನಿವಾಸದಲ್ಲಿ ಪೌರ ಕಾರ್ಮಿಕರೊಂದಿಗೆ ಉಪಹಾರ ಸವಿದರು. ಇತ್ತೀಚೆಗಷ್ಟೇ ತಮ್ಮ ಸೇವೆ ಖಾಯಂಗೊಂಡ ಸಿಹಿ ಸುದ್ದಿ ಪಡೆದಿದ್ದ ಪೌರ ಕಾರ್ಮಿಕ ಮಹಿಳೆಯರಿಗೆ ಇಂದು ಮುಖ್ಯಮಂತ್ರಿ ಯವರೊಂದಿಗೆ ಬೆಳಗ್ಗಿನ ಉಪಾಹಾರ ಸವಿದರು.ಸಿಎಂ ಬೊಮ್ಮಾಯಿ ಅವರನ್ನು ಸುತ್ತುವರಿದ ಪೌರ ಕಾರ್ಮಿಕರು ಶಾಲು, ಹಾರ, ಫಲ ತಾಂಬೂಲ ಅರ್ಪಿಸಿದರು.ಅವರ ಕುಶಲೋಪರಿ ವಿಚಾರಿಸಿದ ಮುಖ್ಯಮಂತ್ರಿಗಳು ನಿಮ್ಮ ಆರೋಗ್ಯ, ನಿಮ್ಮ ಮಕ್ಕಳ ಶಿಕ್ಷಣದ ಬಗ್ಗೆ ಸರ್ಕಾರ ಕಾಳಜಿ ವಹಿಸಲಿದೆ ಎಂದು ಭರವಸೆ ತುಂಬಿದರು. ಜೊತೆಗೆ ನಿಮ್ಮ ಮನೆ ಗಂಡು ಮಕ್ಕಳ ಬಗ್ಗೆ ನಿಗಾ ವಹಿಸಿ ಎಂದರು.ನಂತರ ಪೌರ ಕಾರ್ಮಿಕರಿಗೆ ತಿಂಡಿ ಬಡಿಸಿದ ಮುಖ್ಯಮಂತ್ರಿಯವರು ತಮ್ಮ ಪಕ್ಕ ಕುಳಿತ ಭಾರತಿ ಅವರೊಂದಿಗೆ ಮಾತಿಗಿಳಿದರು. ಅವರ ವೇತನ ಸರಿಯಾಗಿ ಆಗುತ್ತಿದೆಯೇ, ಕೆಲಸದ ಸ್ಥಳದಲ್ಲಿ ಸೂಕ್ತ ಸೌಲಭ್ಯಗಳು ದೊರೆಯುತ್ತಿವೆಯೇ, ಹೀಗೆ ಹಲವು ವಿಷಯಗಳ ಕುರಿತು ಮಾಹಿತಿ ಪಡೆದರು.ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಪೌರ ಕಾರ್ಮಿಕರಿಗೆ ಆತ್ಮವಿಶ್ವಾಸ ಹಾಗೂ ಆತ್ಮ ಗೌರವ ಮೂಡಿಸುವ ಕೆಲಸ ಮಾಡುವುದಾಗಿ ತಿಳಿಸಿದರು.850ಮುಖ್ಯಮಂತ್ರಿ ಅವರು ಇಂದು ತಮ್ಮ ರೇಸ್ ಕೋರ್ಸ್ ರಸ್ತೆಯಲ್ಲಿನ ನಿವಾಸದಲ್ಲಿ ಪೌರ ಕಾರ್ಮಿಕರೊಂದಿಗೆ ಬೆಳಗಿನ ಉಪಾಹಾರ ಸೇವಿಸಿದರು. ಸಚಿವರಾದ ಗೋವಿಂದ ಎಂ. ಕಾರಜೋಳ, ಸಿ.ಸಿ. ಪಾಟೀಲ, ಕೋಟ ಶ್ರೀನಿವಾಸ ಪೂಜಾರಿ ಮೊದಲಾದವರು ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ. ಪಾಟೀಲ, ಕೋಟ ಶ್ರೀನಿವಾಸ ಪೂಜಾರಿ, ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಶಿವಣ್ಣ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!