ಉದಯವಾಹಿನಿ, ಕುದೂರು: ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ಆಂಬುಲೆನ್ಸ್ ವ್ಯವಸ್ಥೆಗೆ ಶಾಸಕ ಎಚ್.ಸಿ. ಬಾಲಕೃಷ್ಣ ಸ್ವತಃ ತಾವೇ ಚಾಲನೆ ಮಾಡುವುದರ ಮೂಲಕ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ‘ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸುವ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.ಸದ್ಯ ಅನುಮೋದನೆ ಹಂತದಲ್ಲಿದ್ದು, ಇಲ್ಲಿನ ವೈದ್ಯರು ವಾಸ ಮಾಡಲಿಕ್ಕೆ ಕ್ವಾರ್ಟರ್ಸ್ ವ್ಯವಸ್ಥೆಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು’ ಎಂದು ತಿಳಿಸಿದರು.2023ರ ಅ.16ರಂದು ‘ಕುದೂರು ಪಿಎಚ್‌ಸಿ ಮೇಲ್ದರ್ಜೆಗೆ ಯಾವಾಗ’ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು.
