ಉದಯವಾಹಿನಿ, ಬೆಳಗಾವಿ: ರಾಯಬಾಗ ಬಿಜೆಪಿ ಶಾಸಕ ದುರ್ಯೋದನ ಐಹೊಳೆ ಅವರೊಂದಿಗೆ ಗೋಕಾಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಾನಂದ ನಾಯಕವಾಡಿ ಅವರು ಏಕವಚನದಲ್ಲೇ ಗದರಿಸಿದ ಆಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
‘ನಾನು ರಾಯಬಾಗ ಎಂಎಲ್‌ಎ ಮಾತನಾಡುತ್ತಿದ್ದೇನೆ. ರಾಯಬಾಗದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅರಣ್ಯ ಭವನ ಮಂಜೂರಾಗಿ, ಕಾಮಗಾರಿಗೆ ಚಾಲನೆ ನೀಡಲಾಗಿತ್ತು.ಈಗ ಸ್ಥಳೀಯ ಅಧಿಕಾರಿಗಳು ಅದನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ. ನೀವು ಸಮಸ್ಯೆ ಬಗೆಹರಿಸಿ ಕಾಮಗಾರಿ ಚಾಲೂ ಮಾಡಿಸಬೇಕು ಸಾಹೇಬರೆ’ ಎಂದು ಐಹೊಳೆ ಕೇಳಿದ್ದಾರೆ.
ಮೊಬೈಲ್‌ನಲ್ಲಿ ಇನ್ನೊಂದು ಕಡೆಯಿಂದ ಪ್ರತಿಕ್ರಿಯಿಸಿದ ಅರಣ್ಯಾಧಿಕಾರಿ, ‘ನೀವ್ ಯಾರು? ಶಾಸಕ ಎಂದು ನನಗೆ ಹೇಗೆ ಗೊತ್ತಾಗಬೇಕು’ ಎಂದು ಕೇಳುತ್ತಾರೆ.ನಾನೇ ಶಾಸಕ ಮಾತನಾಡುತ್ತಿದ್ದೇನೆ, ನಿಮಗೇನು ಫೋಟೊ ಕಳಿಸಬೇಕೇ?’ ಎಂದು ಶಾಸಕ ಕೇಳುತ್ತಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಎಫ್‌ಒ, ಎಲ್ಲಿ ಕಟ್ಟುತ್ತಿದ್ದಾರೆ? ಅದರಿಂದ ಏನಾಗಬೇಕು ಈಗ? ಅದೇನು ನಮ್ಮಪ್ಪನ ಜಾಗ ಅಲ್ಲ. ಸರ್ಕಾರದಿಂದ ಮಂಜೂರಾಗಬೇಕು. ಅನಧಿಕೃತ ಇದ್ದ ಕಾರಣ ಬಂದ್ ಮಾಡಿದ್ದಾರೆ’ ಎನ್ನುತ್ತಾರೆ.
