ಉದಯವಾಹಿನಿ, ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ದೇಶದ ಫಲಾನುಭವಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ನಡೆಸಿದ ಸಂವಾದ ಕಾರ್ಯಕ್ರಮವನ್ನು ಯಲಹಂಕ ಕ್ಷೇತ್ರದ ದಿಬ್ಬೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ನಿಯೋಗ ವೀಕ್ಷಿಸಿತು.
ಈ ವೇಳೆ ಕೇಂದ್ರೀಯ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿಗಳಾದ ಎಸ್.ಆರ್.ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ವಿರೋಧ ಪಕ್ಷ ನಾಯಕ ಆರ್.ಅಶೋಕ್, ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪ,ಗೋವಿಂದಕಾರಜೋಳ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮಂತ್ರಿಗಳು ಶಾಸಕರು, ಸೇರಿದಂತೆ ಯಲಹಂಕ ಕ್ಷೇತ್ರ ಶಾಸಕ ಎಸ್.ಆರ್.ವಿಶ್ವನಾಥ್, ಆರ್.ಆರ್.ನಗರ ಶಾಸಕ ಮುನಿರತ್ನಂ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
