ಉದಯವಾಹಿನಿ, ಮೈಸೂರು: ಸಿಸಿಬಿ  ಪೊಲೀಸ್ ರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ 4.17 ಲಕ್ಷ ಮೌಲ್ಯದ 241 ಮೂಟೆ ಪಡಿತರ ಅಕ್ಕಿ ವಶಪಡಿಸಿಕೊಳ್ಳಲಾಗಿದೆ. ಪಡಿತರ ಅಕ್ಕಿ ಸಾಗಣೆ ಮಾಡುತ್ತಿದ್ದ ಲಾರಿಯನ್ನೂ ಸಹ ವಶಕ್ಕೆ ಪಡೆಯಲಾಗಿದೆ.
ಖಚಿತ ಮಾಹಿತಿ ಆಧರಿಸಿ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿದೆ ಹೆಬ್ಬಾಳ್ ನಲ್ಲಿರುವ ಕೆ.ಎಫ್.ಸಿ.ಐ.ಗೋದಾಮಿನಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಪಡಿತರ ಅಕ್ಕಿ ಸಿದ್ದಲಿಂಗಪುರ ಗ್ರಾಮದ ಬಳಿ ಸಿಸಿಬಿ ಪೆÇಲೀಸರ ಬಲೆಗೆ ಬಿದ್ದಿದೆ. ಏಂ 09 ಆ 9686 ನೊಂದಣಿ ಸಂಖ್ಯೆಯ ಲಾರಿಯಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ವೇಳೆ ಪೆÇಲೀಸರು ದಾಳಿ ನಡೆಸಿ ಅಕ್ಕಿಯನ್ನ ವಶಪಡಿಸಿಕೊಂಡಿದ್ದಾರೆ. ಸಾಗಣೆ ಮಾಡುತ್ತಿದ್ದ ಲಾರಿ ಚಾಲಕನನ್ನೂ ಸಹ ವಶಕ್ಕೆ ಪಡೆದಿದ್ದಾರೆ. ಸಧ್ಯ ವಶಪಡಿಸಿಕೊಳ್ಳಲಾದ ಅಕ್ಕಿ,ಲಾರಿ ಹಾಗೂ ಚಾಲಕನನ್ನ ಮೇಟಗಳ್ಳಿ ಪೆÇಲೀಸರ ವಶಕ್ಕೆ ನೀಡಲಾಗಿದೆ. ಸ್ಥಳಕ್ಕೆ ಆಹಾರ ನಿರೀಕ್ಷಕರಾದ ಕಿರಣ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಟಗಳ್ಳಿ ಠಾಣೆ ಇನ್ಸ್ಪೆಕ್ಟರ್ ದಿವಾಕರ್ ಹಾಗೂ ಸಬ್ ಇನ್ಸ್ಪೆಕ್ಟರ್ ಶಬರೀಶ್ ಆರೋಪಿಯನ್ನ ವಿಚಾರಣೆಗೆ ಒಳಪಡಿಸಿದ್ದಾರೆ. ನಗರ ಪೊಲೀಸ್  ಆಯುಕ್ತ ಡಾ.ಬಿ.ರಮೇಶ್,ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿರವರಾದ ಮುತ್ತುರಾಜ್,ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಸಂದೇಶ್ ಕುಮಾರ್ ಉಸ್ತುವಾರಿಯಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ಪೂವಯ್ಯ, ಪಿಎಸ್ಸೈ ಲೇಪಾಕ್ಷ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!