ಉದಯವಾಹಿನಿ, ಬಂಗಾರಪೇಟೆ: ವಿಶ್ವ ರೈತ ದಿನಾಚರಣೆ ಹಾಗೂ ಕೆ.ಎಸ್.ಪುಟ್ಟಣ್ಣಯ್ಯ ರವರ ಜನ್ಮ ದಿನಾಚರಣೆಯನ್ನು ರೈತ ಸಂಘದಿಂದ ತಾಲ್ಲೂಕು ಕಛೇರಿ ಮುಂದೆ ಪ್ರಗತಿ ರೈತರಿಗೆ ಸನ್ಮಾನ ಬಡವರಿಗೆ ತರಕಾರಿ ಹಂಚುವ ಮುಖಾಂತರ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮಾತನಾಡಿ ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ ತಾಲ್ಲೂಕಿನ ರೈತರಿಗೆ ಯಾವುದೇ ಸಮಸ್ಯೆಯಾದರೂ ನೇರವಾಗಿ ನಮ್ಮನ್ನು ಸಂಪರ್ಕ ಮಾಡಿ ಜೊತೆಗೆ ಕಂದಾಯ ಹಾಗೂ ಅರಣ್ಯ ಇಲಾಖೆಯ ಜಮೀನುಗಳಿಗೆ ಸಂಬಂಧಿಸಿದ ಸಮಸ್ಯೆಯನ್ನು ಶೀಘ್ರದಲ್ಲಿ ಬಗೆಹರಿಸುವ ಭರವಸೆಯನ್ನು ಕಾರ್ಯಕ್ರಮದಲ್ಲಿ ನೀಡಿದರು.
ಕೇಂದ್ರ ಸರ್ಕಾರ ಬರ ನಿರ್ವಹಣೆಗೆ ಅನುದಾನ ಬಿಡುಗಡೆ ಮಾಡಲು ಮೀನಾಮೇಷ ಎಣಿಸುತ್ತಿದೆ. ಮಾನ್ಯ ಮುಖ್ಯ ಮಂತ್ರಿಗಳು ಸಂಕ್ರಾಂತಿ ಹಬ್ಬಕ್ಕೆ ರೈತರ ಖಾತೆಗಳಿಗೆ ೨೦೦೦ ರೂಪಾಯಿ ಪರಿಹಾರ ವಿತರಣೆ ಮಾಡುವುದಾಗಿ ಹೇಳಿದರು.
ಕೃಷಿ ಜಮೀನನ್ನು ಕೈಗಾರಿಕೆ ರಸ್ತೆ, ಲೇಔಟ್ ಹೆಸರಿನಲ್ಲಿ ಬಲವಂತ ಸ್ವಾಧೀನ ಮಾಡಿಕೊಂಡು ರೈತರನ್ನು ಒಕ್ಕಲೆಬ್ಬಿಸಿದರೆ ಆಹಾರಕ್ಕಾಗಿ ಮುಂದಿನ ದಿನಗಳಲ್ಲಿ ಮೂರನೇ ಮಹಾ ಯುದ್ದ ಶುರುವಾಗುವ ಕಾಲ ದೂರವಿಲ್ಲವೆಂದು ಕಾರ್ಯಕ್ರಮದಲ್ಲಿ ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್ ಸರ್ಕಾರದ ರೈತ ವಿರೋಧಿ ದೋರಣೆ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

error: Content is protected !!