ಉದಯವಾಹಿನಿ, ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಶಿಕ್ಷಣ ನೀತಿಯಲ್ಲಿ ಪದವಿ ಕಾಲೇಜುಗಳಲ್ಲಿ ಎನ್‌ಸಿಸಿ, ಎನ್‌ಎಸ್‌ಎಸ್‌ ಹಾಗೂ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ನಲ್ಲಿ ಯಾವುದಾದರು ಒಂದರಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಿದೆ. ರಾಜ್ಯದ ಶಿಕ್ಷಣ ನೀತಿಯಲ್ಲೂ ಇದನ್ನು ಅಳವಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ ಎಂದು ಭಾರತ್‌ ಸ್ಕೌಟ್ಸ್‌, ಗೈಡ್ಸ್‌ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್‌.ಸಿಂಧ್ಯಾ ಹೇಳಿದರು.
ನಗರದ ಅನಿಬೆಸೆಂಟ್‌ ಪಾರ್ಕ್‌ನ ರಾಜ್ಯ ಸ್ಕೌಟ್ಸ್‌ ಮತ್ತು ಗೈಡ್ಸ್‌ ತರಬೇತಿ ಕೇಂದ್ರದಲ್ಲಿ ಬುಧವಾರ ಶಿಕ್ಷಕರಿಗಾಗಿ ನಡೆದ ರಾಜ್ಯ ಮಟ್ಟದ ‘ಹಿಮಾಲ ವೃಕ್ಷ ಮಣಿದಾರ ಅಭ್ಯಾಸಕ್ರಮ’ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಸ್ಕೌಟ್ಸ್‌ ಮತ್ತು ಗೈಡ್ಸ್‌ ಕಡ್ಡಾಯವಾಗಿ ಜಾರಿಗೆ ತರುವ ಸಂದರ್ಭಕ್ಕೆ ಅನುಗುಣವಾಗಿ ಶಿಕ್ಷಕರಿಗೆ ವಿವಿಧ ಹಂತದ ಗುಣಮಟ್ಟದ ತರಬೇತಿಗಳಿಗೆ 2023-24ನೇ ಸಾಲಿನಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ. ಈಗಾಗಲೇ ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪದವಿ ಹಂತದವರೆಗೂ ಸುಮಾರು 10 ಸಾವಿರ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ ಎಂದರು.
ಮುಂದಿನ ದಿನಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೂ ತರಬೇತಿ ನೀಡಲು ಎಲ್ಲಾ ರೀತಿಯ ನೆರವು ನೀಡುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಿಗೆ ಮನವಿ ಮಾಡಲಾಗಿದೆ ಎಂದರು.

 

Leave a Reply

Your email address will not be published. Required fields are marked *

error: Content is protected !!