ಉದಯವಾಹಿನಿ, ವಿಜಯಪುರ :ಮೋಟಾರ್ ಸೈಕಲ್ ಕಳ್ಳತನ ಹಾಗೂ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕಳ್ಳರನ್ನು ಪೆÇಲೀಸರು ಬಂಧಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಮಲಘಾಣ ಗ್ರಾಮದ ಅನೀಲಕುಮಾರ ಬಾಗೋಡಿ, ಯಾದಗಿರಿ ಜಿಲ್ಲೆಯ ಚಾಮನಾಳ ಗ್ರಾಮದ ವೆಂಕಟೇಶ ನೀಡಗಿ ಹಾಗೂ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ಶರಣಯ್ಯಸ್ವಾಮಿ ಗೊಬ್ಬಿ ಬಂಧಿತ ಆರೋಪಿಗಳು. ಈ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ದೇವರ ಹಿಪ್ಪರಗಿ ಪೆÇಲೀಸರು ಯಶಸ್ವಿಯಾಗಿದ್ದಾರೆ.
ಜಿಲ್ಲೆಯ ದೇವರ ಹಿಪ್ಪರಗಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮೋಟಾರ್ ಸೈಕಲ್ ಹಾಗೂ ಮನೆಗಳ್ಳತನ ಪ್ರಕರಣಗಳು ನಡೆದಿದ್ದವು. ಈ ಪ್ರಕರಣಗಳನ್ನು ಭೇದಿಸಲು ವಿಜಯಪುರ ಜಿಲ್ಲಾ ವರಿಷ್ಠಾಧಿಕಾರಿಗಳು ತಂಡವನ್ನು ರಚಿಸಿದ್ದರು. ಈ ತಂಡ ಅತ್ಯಂತ ಚುರುಕಾಗಿ ಕಾರ್ಯಾಚರಣೆ ನಡೆಸಿ ಕಳ್ಳತನಾರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ದೇವರಹಿಪ್ಪರಗಿ ಪೆÇಲೀಸ್ ಠಾಣೆ ವ್ಯಾಪ್ತಿಯ ಹಾಗೂ ಯಾದಗಿರಿ ಜಿಲ್ಲಾ ವ್ಯಾಪ್ತಿಯ ಹಾಗೂ ಇತರೆ ಕಡೆಗಳಲ್ಲಿ ಅಂದಾಜು 4,15,000 ರೂ ಕಿಮ್ಮತ್ತಿನ ಹತ್ತು ಮೋಟಾರು ಸೈಕಲಗಳು ಹಾಗೂ ದೇವರಹಿಪ್ಪರಗಿ ಪಟ್ಟಣದ ಮಲ್ಲಯ್ಯನ ದೇವಸ್ಥಾನದಲ್ಲಿನ ಕಾಣಿಕೆ ಹುಂಡಿಯನ್ನು ಕಳ್ಳತನ ಮಾಡಲು ಯತ್ನಿಸಿದ ಬಗ್ಗೆ ಆರೋಪಿಗಳು ಒಪ್ಪಿದ್ದು , ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!