ಉದಯವಾಹಿನಿ, ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕೇಂದ್ರ ಸಚಿವರಾಗುವ ಬಗ್ಗೆ ತಮ್ಮೊಂದಿಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡರು, ಪ್ರಧಾನಿ ನರೇಂದ್ರಮೋದಿ ಅವರ ಮನಸಿನಲ್ಲಿ ಏನಿದೋ ಗೊತ್ತಿಲ್ಲ ಎಂದು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಧಾನಿಯವರ ಕ್ರಿಯಾಯೋಜ ನೆಯ ಬಗ್ಗೆ ಅವರ ಸಂಪುಟದ ಸಚಿವರಿಗೂ ಗೊತ್ತಾಗದ ರೀತಿಯಲ್ಲಿ ತೀರ್ಮಾನ ಮಾಡುತ್ತಾರೆ. ಹೊಸದಾಗಿ ವಿಧಾನಸಭೆ ಪ್ರವೇಶಿಸಿದವರನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಹೀಗಾಗಿ ಅವರು ಯಾವ ತೀರ್ಮಾನ ಮಾಡುತ್ತಾರೆ ಎಂಬ ಬಗ್ಗೆ ಹೇಳಲು ಆಗುವುದಿಲ್ಲ. ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ಹೇಳಿದರು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಸ್ರ್ಪಧಿಸುವ ಸನ್ನಿವೇಶ ಬಂದರೆ ನಾವೆಲ್ಲ ಕೂತು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಪ್ರಧಾನಿ ನರೇಂದ್ರಮೋದಿ ಅವರ ಜೊತೆ ಕುಮಾರಸ್ವಾಮಿ ಸಂಪರ್ಕದಲ್ಲಿದ್ದಾರೆ. ಪ್ರಧಾನಿಯವರು ಏನು ಹೇಳುತ್ತಾರೋ ಗೊತ್ತಿಲ್ಲ. ಅವರು ಸ್ಪರ್ಧೆಯ ಬಗ್ಗೆ ಏನಾದರೂ ಹೇಳಿದ ಮೇಲೆ ಮುಂದಿನ ತೀರ್ಮಾನ ಮಾಡುತ್ತೇವೆ ಎಂದರು.
ಸ್ಪರ್ಧೆ ಇಲ್ಲ: ನನಗೀಗ 91 ವರ್ಷವಾಗಿದೆ. ರಾಜ್ಯಸಭೆ ಸದಸ್ಯತ್ವದ ಅವ ರಾಜ್ಯಸಭೆ ಸದಸ್ಯತ್ವದ ಅವ ಎರಡೂವರೆ ವರ್ಷವಿದೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವುದರಿಂದ ಅವರು ಕರೆದ ಕ್ಷೇತ್ರಗಳಲ್ಲಿ ಹೋಗಿ ಪ್ರಚಾರ ಮಾಡುವುದಾಗಿ ಇದೇ ಸಂದರ್ಭದಲ್ಲಿ ತಿಳಿಸಿದರು. ಹಾಸನ ಲೋಕಸಭಾ ಕ್ಷೇತ್ರದಿಂದ ಸಂಸದ ಪ್ರಜ್ವಲ್ ರೇವಣ್ಣ ಅವರು ಸ್ರ್ಪಧಿಸಿದ್ದಾರೆ. ಅವರಿಗೆ ಮೋದಿಯವರ, ಕುಮಾರಸ್ವಾಮಿ, ನಾನು ಹಾಗೂ ಜನತೆ ಆಶೀರ್ವಾದ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

Leave a Reply

Your email address will not be published. Required fields are marked *

error: Content is protected !!