
ಉದಯವಾಹಿನಿ , ಬೆಂಗಳೂರು: ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ದೇಶಾದ್ಯಂತ ದೇವಾಲಯಗಳನ್ನು ಸ್ವಚ್ಛಗೊಳಿಸೋಣ ಎಂಬ ಪ್ರಧಾನಿ ನರೇಂದ್ರಮೋದಿ ಅವರ ಕರೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದು ಬಿಜೆಪಿ ನಾಯಕರುಗಳು ದೇವಾಲಯಗಳ ಸವಚ್ಛತಾ
ಕಾರ್ಯದಲ್ಲಿ ಪಾಲ್ಗೊಂಡು ವಿವಿಧ ದೇವಾಲಯಗಳ ಆವರಣವನ್ನು ಶುಚಿಗೊಳಿಸಿದರು.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಶಿವಮೊಗ್ಗದ ಶಿಕಾರಿಪುರದಲ್ಲಿರುವ ಶ್ರಿ ಹುಚ್ಚುರಾಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಸ್ವಚ್ಛಥಾ ಕಾರ್ಯದಲ್ಲಿ
ಪಾಲ್ಗೊಂಡರು. ವಿಪಕ್ಷ ನಾಯಕ ಆರ್. ಅಶೋಕ್ ಅವರು ಬೆಂಗಳೂರಿನ ಜಯನಗರದ ೪ನೇ ಬ್ಲಾಕ್‌ನಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.
ಮಾಜಿ ಸಚಿವ ಅಶ್ವತ್ಥನಾರಾಯಣ, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಪಿ. ರಾಜೀವ್. ಪ್ರಿತಂಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ನಾರಾಯಣಗೌಡ ಇವರುಗಳು ಮಲ್ಲೇಶ್ವರದ ಕೋದಂಡರಾಮ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದರು.ರು.
