ಉದಯವಾಹಿನಿ, ತುಮಕೂರು: ನಮ್ಮ ಮೆಟ್ರೋಗೆ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಹೆಸರಿಡುವಂತೆ ಪಟ್ಟನಾಯಕನಹಳ್ಳಿಯ ಸ್ಫಟಿಕಪುರಿ ಮಹಾಸಂಸ್ಥಾನದ ಶ್ರೀ ನಂಜಾವಧೂತ ಸ್ವಾಮೀಜಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.ಕೆಂಪೇಗೌಡರ ಸಂಸ್ಥಾಪನಾ ದಿನವನ್ನು ಬೆಂಗಳೂರು ಹಬ್ಬವಾಗಿ ಆಚರಿಸಬೇಕು.
ಇದರೊಂದಿಗೆ ನಮ್ಮ ಮೆಟ್ರೋಗೆ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಅವರು ಸಿರಾ ತಾಲ್ಲೂಕು ಪಟ್ಟನಾಯಕನಹಳ್ಳಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಹೇಳಿದರು.
ಕೆಂಪೇಗೌಡರ ಜೀವನ ಚರಿತ್ರೆಯನ್ನು ಮುಂದಿನ ಪೀಳಿಗೆಯ ಮಕ್ಕಳಿಗೆ ತಿಳಿಸುವ ಕಾರ್ಯ ಅಗತ್ಯವಾಗಿದೆ.ಆದ್ದರಿಂದ ಕೆಂಪೇಗೌಡರ ಜೀವನ ಚರಿತ್ರೆಯನ್ನು ಎಲ್.ಕೆ.ಜಿ. ಯಿಂದ ಪದವಿ ವರೆಗಿನ ಪಠ್ಯ ಪುಸ್ತಕಗಳಲ್ಲಿ ಮುದ್ರಿಸಬೇಕು. ಈ ಕಾರ್ಯ ಮುಂದಿನ ಶೈಕ್ಷಣಿಕ ವರ್ಷದಿಂದಲೇ ಮುದ್ರಿಸುವಂತಹ ಕೆಲಸವನ್ನು ಸರ್ಕಾರ ಮಾಡಬೇಕಿದೆ ಎಂದರು.
