ಉದಯವಾಹಿನಿ, ಗದಗ: ವಾರದ ಹಿಂದಷ್ಟೇ ನೆಚ್ಚಿನ ನಟನ ಹುಟ್ಟುಹಬ್ಬದ ಆಚರಣೆಗೆ ಕಟೌಟ್ ನಿಲ್ಲಿಸುತ್ತಿದ್ದಾಗ ಮೂರು ಜನ ಅಭಿಮಾನಿಗಳು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ದುರಂತ ಘಟನೆ ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲಿ ನಡೆದಿದೆ.ಇದೀಗ ಅಗಲಿದ ಅಭಿಮಾನಿಗಳ ಕುಟುಂಬಕ್ಕೆ ರಾಕಿಂಗ್ ಸ್ಟಾರ್ ಯಶ್ ತಂಡ ಪರಿಹಾರ ವಿತರಿಸಿದೆ. ಮೃತ ಯುವಕರ ಕುಟುಂಬಕ್ಕೆ ತಲಾ ೫ ಲಕ್ಷ ರೂ. ಪರಿಹಾರದ ಚೆಕ್ ನೀಡಲಾಗಿದೆ. ನಟ ಯಶ್ ಅವರ ಸ್ನೇಹಿತರಾದ ಚೇತನ್ ಮತ್ತು ರಾಕೇಶ್ ಅವರು ಇಂದು ದುರಂತ ನಡೆದ ಸುರಂಗಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಮೂರು ಕುಟುಂಬಗಳಿಗೆ ಸಾಂತ್ವನ ಹೇಳಿ ಪರಿಹಾರದ ಚೆಕ್ ವಿತರಿಸಿದ್ದಾರೆ. ಪರಿಹಾರವಾಗಿ ೫ ಲಕ್ಷ ರೂ. ನೀಡಲಾಗಿದೆ.ಲಕ್ಷ್ಮೇಶ್ವರ ತಾಲೂಕಿನ ಸೂರಂಗಿ ಗ್ರಾಮದಲ್ಲಿ ಜನವರಿ ೭ ರಂದು ರಾತ್ರಿ ದುರಂತ ಸಂಭವಿಸಿದೆ. ಯಶ್ ಹುಟ್ಟುಹಬ್ಬದ ಕಟೌಟ್ ನಿಲ್ಲಿಸಲು ಯತ್ನಿಸಿದ ಮೂವರು ಯುವಕರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಸುರಂಗಿಯ ಮುರಳಿ, ನವೀನ, ಹಣಮಂತ ಪ್ರಾಣ ಕಳೆದುಕೊಂಡಿದ್ದಾರೆ. ಈ ಮೂವರ ಕುಟುಂಬಕ್ಕೆ ತಲಾ ಐದು ಲಕ್ಷ ರೂ. ಚೆಕ್ ನೀಡಲಾಗಿದೆ. ಘಟನೆಯಲ್ಲಿ ಇತರ ಮೂವರು ಯುವಕರು ಗಾಯಗೊಂಡಿದ್ದಾರೆ.
